ಮೈಸೂರು: ‘ದಿನೆ ದಿನೇ ಸರ್ಕಾರಿ ಶಾಲೆಗಳು ಮುಚ್ಚುತ್ತಿದ್ದು, ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಗಮನ ಹರಿಸಬೇಕು. ಶಾಲೆಗಳು ಮುಚ್ಚದಂತೆ ಮಕ್ಕಳ ಹಾಜರಾತಿ ಬಗ್ಗೆ ಕ್ರಮ ತೆಗೆದು ಕೊಳ್ಳಬೇಕು’ ಎಂದು ಮೇಯರ್ ಸಂದೇಶ್ ಸ್ವಾಮಿ ತಿಳಿಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಶಾಖೆಯು ಸಿದ್ಧಾರ್ಥನಗರದ ಶಿಕ್ಷಕ ಸದನದಲ್ಲಿ ಸೋಮವಾರ ಏರ್ಪಡಿಸಿದ್ದ ‘ಶೈಕ್ಷಣಿಕ ವಿಚಾರ ಸಂಕಿರಣ ಎನ್ಸಿಎಫ್-2005’ ಮತ್ತು ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಲಕ್ಷ್ಮಿಪುರಂ ಸರ್ಕಾರಿ ಪ್ರಾಥಮಿಕ ಶಾಲೆ ಈಗಾಗಲೇ ಮುಚ್ಚಿದೆ. ನಗರದ ಇತರೆ ಎರಡು ಶಾಲೆಗಳು ಮುಚ್ಚುವ ಹಂತದಲ್ಲಿವೆ. ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಲಿಯಾಗುತ್ತಿರುವ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಹಾಗಾಗಿ ಸರ್ಕಾರಿ ಶಾಲೆಗಳಿಗೆ ಮಕ್ಕಳು ಪ್ರವೇಶ ಪಡೆಯುತ್ತಿರುವ ಪ್ರಮಾಣ ಗಣನೀಯವಾಗಿ ಕಡಿಮೆ ಆಗಿದೆ’ ಎಂದು ತಿಳಿಸಿದರು.

‘ಖಾಸಗಿ ಶಾಲೆಗಳಲ್ಲಿ ಎಲ್ಕೆಜಿಗೆ ಮಗುವನ್ನು ದಾಖಲು ಮಾಡಲು ರೂ.5 ಲಕ್ಷದವರೆಗೆ ಡೊನೇಷನ್ ನೀಡಬೇಕು. ಹಾಗಾಗಿ ಶಿಕ್ಷಣ ಶ್ರೀಮಂತರ ಪಾಲಾಗುತ್ತಿದೆ. ಎಲ್ಲರು ಖಾಸಗಿ ಶಿಕ್ಷಣ ಸಂಸ್ಥೆಗಳ ಮೊರೆ ಹೋದರೆ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಸಂಪೂರ್ಣ ಮುಚ್ಚಿ ಕೆಳವರ್ಗದ ಮತ್ತು ಬಡ ಜನರಿಗೆ ಶಿಕ್ಷಣ ದೊರಕುವುದಿಲ್ಲ’ ಎಂದು ತಿಳಿಸಿದರು.‘ಶಿಕ್ಷಕ ಸದನದ ಸುತ್ತಲು ಬೆಳೆದು ನಿಂತಿರುವ ಗಿಡಗಂಟೆಗಳನ್ನು ಪಾಲಿಕೆ ವತಿಯಿಂದ ಸ್ವಚ್ಛ ಮಾಡಿಸಲಾಗುವುದು. ಶಿಕ್ಷಕರ ಸದನಕ್ಕೆ ಕಾಂಪೌಂಡ್ ನಿರ್ಮಿಸುವ ಕುರಿತು ಪಾಲಿಕೆಯಿಂದ ಆರ್ಥಿಕವಾಗಿ ಸಹಾಯ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಶಿಕ್ಷಕರ ಪ್ರಾಥಮಿಕ ಶಾಲಾ ಶಿಕ್ಷಕರ ಮಕ್ಕಳಿಗೆ ಗಣ್ಯರು ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುನೀತಾ ವೀರಪ್ಪಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗೇಂದ್ರಕುಮಾರ್, ಡಯಟ್ ಸಂಸ್ಥೆ ಪ್ರಾಂಶುಪಾಲರಾದ ರುಕ್ಸಾನ ನಾಜನೀನ್, ಸಂಘದ ಮೈಸೂರು ಶಾಖೆಯ ಮಾಜಿ ಅಧ್ಯಕ್ಷ ಎಂ.ಜೆ.ನೀಲಕಂಠ, ಎಚ್.ಡಿ.ಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಟಿ.ಬಸವರಾಜು, ಮೈಸೂರು ಉತ್ತರ ವಲಯ ಬಿಇಓ ಆರ್.ಕರೀಗೌಡ, ಮೈಸೂರು ದಕ್ಷಿಣ ವಲಯ ಬಿಇಓ ಆರ್.ರಘುನಂದನ್, ಕೆ.ಆರ್.ನಗರ ಬಿಇಓ ಮಂಜುಳಾ, ಪಿರಿಯಾಪಟ್ಟಣ ಬಿಇಓ ಜಿ.ಎ.ಲೋಕೇಶ್, ನಂಜನ ಗೂಡು ಬಿಇಓ ಚಂದ್ರಪಾಟೀಲ್, ಸಂಘದ ರಾಜ್ಯ ಉಪಾಧ್ಯಕ್ಷ ಎ.ಎಂ.ರಮೇಶ್, ಮಹಿಳಾ ಸಂಚಾಲಕಿ ಜಯಶ್ರೀ, ಮೈಸೂರು ವಿಭಾಗದ ಸಂಘಟನಾ ಕಾರ್ಯದರ್ಶಿ ಕುಚೇಲ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾದ ಸಿ.ಕೆ.ಶಿವಣ್ಣ, ಸಿ.ಎಂ.ಅಂಕಯ್ಯ, ಬಸವರಾಜು, ದಯಾನಂದ, ಗಾಯತ್ರಿ ಉಪಸ್ಥಿತರಿದ್ದರು. ಸಂಘದ ಜಿಲ್ಲಾಧ್ಯಕ್ಷ ಎಚ್.ಬಿ.ಬಸವರಾಜು ಅವರು ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.