ಶನಿವಾರ, ಏಪ್ರಿಲ್ 17, 2021
31 °C

ಮುಜುಗರ ಆಗದಂತೆ ಸಭೆ: ಪ್ರಹ್ಲಾದ ಜೋಷಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಭೆ ಎಲ್. ಕೆ. ಅಡ್ವಾಣಿ ಅವರಿಗೆ ಯಾವುದೇ ಮುಜುಗರ ತಾರದಂತೆ ನಡೆಯಲಿದೆ ಎಂದು ಸಂಸದ ಪ್ರಹ್ಲಾದ ಜೋಷಿ ಹೇಳಿದರು.`ಜಗನ್ನಾಥ ಭವನ~ದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಸಾರ್ವಜನಿಕ ಸಭೆಯಲ್ಲಿ ಅಡ್ವಾಣಿ ಅವರ ಜೊತೆ ಯಾರು ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂಬ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ~ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.`ಅಡ್ವಾಣಿಯವರ ಬೆಂಗಳೂರಿನ ಸಮಾವೇಶ ರದ್ದಾಗಿದೆ ಎಂಬ ಸುದ್ದಿ ಶನಿವಾರ ಹೇಗೆ ಹರಡಿತು ಎಂಬುದೇ ತಿಳಿಯುತ್ತಿಲ್ಲ. ಈ ಸುದ್ದಿ ಹಬ್ಬಿದ ವಿಚಾರವಾಗಿ ನಾನು ಪಕ್ಷದ ಅಧ್ಯಕ್ಷರೂ ಸೇರಿದಂತೆ ಹಲವು ಮುಖಂಡರಲ್ಲಿ ವಿಚಾರಿಸಿದೆ. ಆದರೆ ಅವರಿಗೂ ಇದು ಹೇಗಾಯಿತು ಎಂಬುದು ತಿಳಿಯುತ್ತಿಲ್ಲ~ ಎಂದರು.ಸಮಾವೇಶದಲ್ಲಿ ಸುಮಾರು 40 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಯಾತ್ರೆ ಸಾಗುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡಗಳಲ್ಲಿ ಅಡ್ವಾಣಿಯವರ ರಥದ ಮಾದರಿಯಲ್ಲೇ ಚಿಕ್ಕ ರಥಗಳನ್ನು ಸಿದ್ಧಪಡಿಸಲಾಗಿದೆ.ಈ ರಥಗಳು ಆಯಾ ಜಿಲ್ಲೆಗಳ ತಾಲ್ಲೂಕು ಕೇಂದ್ರಗಳತ್ತ ಸಾಗಿ ಭ್ರಷ್ಟಾಚಾರ ರಹಿತ ರಾಜಕಾರಣದ ಕುರಿತು ಸಂದೇಶ ಸಾರಲಿವೆ ಎಂದರು. ಸಚಿವ ಅಶೋಕ ಅವರು ಸೋಮವಾರದ ಯಾವುದೇ ಸಭೆಯಲ್ಲಿ ಪಾಲ್ಗೊಳ್ಳದಿರುವುದಕ್ಕೆ ತಮಗೆ ಕಾರಣ ತಿಳಿದಿಲ್ಲ ಎಂದರು. ಯಾತ್ರೆಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಉಸ್ತುವಾರಿಯನ್ನು ಶಾಸಕ ಸಿ.ಟಿ. ರವಿ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯನ್ನು ಎಂ. ಭಾನುಪ್ರಕಾಶ್ ಅವರಿಗೆ ವಹಿಸಲಾಗಿದೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.