ಚಿಕ್ಕಬಳ್ಳಾಪುರ: ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದ ಕೆಲವು ಪ್ರದೇಶ ಒಳಗೊಂಡಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವನ್ನು ತಾತ್ಕಾಲಿಕವಾಗಿ ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಸ್ನಾತಕೋತ್ತರ ಕೇಂದ್ರದಲ್ಲಿ ಸ್ಥಾಪಿಸುವ ಸಾಧ್ಯತೆ ಬಗ್ಗೆ ಚಿಂತನೆ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.

‘ಬೆಂಗಳೂರು ಉತ್ತರ ವಿ.ವಿಗಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ 110 ಎಕರೆ ಜಮೀನು ಗುರುತಿಸಲಾಗಿದೆ. ಅಲ್ಲಿ ಹೊಸ ಕಟ್ಟಡಗಳು ನಿರ್ಮಾಣಗೊಳ್ಳಲು ಎರಡರಿಂದ ಮೂರು ವರ್ಷಗಳಾದರೂ ಬೇಕು.

ಅಲ್ಲಿವರೆಗೆ ಲಕ್ಷಾಂತರ ರೂಪಾಯಿ ಬಾಡಿಗೆ ಕೊಟ್ಟು ಬೇರೆ ಕಟ್ಟಡದಲ್ಲಿ ವಿಶ್ವವಿದ್ಯಾಲಯ ನಡೆಸುವುದಕ್ಕಿಂತ ತಾತ್ಕಾಲಿಕವಾಗಿ ವಿಟಿಯು ಸ್ನಾತಕೋತ್ತರ ಕೇಂದ್ರದಲ್ಲಿ ನಡೆಸುವ ಉದ್ದೇಶವಿದೆ’ ಎಂದು ಹೇಳಿದರು.

‘ವಿಟಿಯು ಆಡಳಿತ ಮಂಡಳಿ ದೂರದೃಷ್ಟಿ ಇಲ್ಲದೆ ಕಾನೂನು ಬಾಹಿರವಾಗಿ ಸುಮಾರು ₹150 ಕೋಟಿ ವೆಚ್ಚದಲ್ಲಿ ಕಟ್ಟಡ ಕಟ್ಟಿದೆ. ಆದರೆ ಇಲ್ಲಿ ವಿದ್ಯಾರ್ಥಿಗಳು ಬರುತ್ತಿಲ್ಲ. ಹೀಗಾಗಿ ಈ ಕಟ್ಟಡ ಸದುಪಯೋಗ ಮಾಡಿಕೊಳ್ಳುವ ಕುರಿತು ಚಿಂತಿಸುತ್ತಿದ್ದೇವೆ. ಶೀಘ್ರದಲ್ಲಿಯೇ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ’ ಎಂದು ತಿಳಿಸಿದರು.

‘ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ಪೂರ್ಣಗೊಳಿಸಲೇ ಬೇಕು ಇಲ್ಲದಿದ್ದರೆ ಕಟ್ಟಡಗಳು ಹಾಳಾಗುತ್ತವೆ. ಸದ್ಯ ಇಲ್ಲಿರುವ ಕಟ್ಟಡಗಳಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ಥಳಾಂತರ ಮಾಡಲು ಸಾಧ್ಯವೇ ಎಂದು ಪರಿಶೀಲಿಸಲು ಬಂದಿರುವೆ’ ಎಂದು ತಿಳಿಸಿದರು.

ಎಂಜಿನಿಯರ್ಗೆ ತರಾಟೆ: ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಂತೆ ಕಟ್ಟಡಗಳ ಕಾಮಗಾರಿ ಕುರಿತು ಮಾಹಿತಿ ಪಡೆಯಲು ಮುಂದಾದ ಸಚಿವ ರಾಯರೆಡ್ಡಿ ಅವರು ಪ್ರಶ್ನೆಗಳ ಸುರಿಮಳೆಗರೆದು ಸ್ಥಾನಿಕ ಎಂಜಿನಿಯರ್ ಬಿ.ಸಿ.ಶಾಂತಪ್ಪ ಅವರನ್ನು ತರಾಟೆಗೆ ತೆಗೆದುಕೊಂಡರು.

‘ಇಲ್ಲಿರುವ ಕಟ್ಟಡಕ್ಕೆ ಪ್ರತಿ ಚದರಡಿ ನಿರ್ಮಾಣಕ್ಕೆ ಸುಮಾರು ₹ 3800ರಷ್ಟು ಖರ್ಚಾಗಿದೆ ಎಂದು ಲೆಕ್ಕ ತೋರಿಸುತ್ತಿರಿ. ಆದರೆ ಸ್ವತಃ ನೀವೇ ಮನೆ ಕಟ್ಟಿಕೊಂಡಿದ್ದರೆ ಚದರಡಿಗೆ ₹ 2000 ಖರ್ಚು ಮಾಡಲು ಸಾಧ್ಯವಿಲ್ಲ.

ಬೆಂಗಳೂರಿನಂತಹ ನಗರದಲ್ಲಿ ತೇಗಿನ ಮರ, ಮಾರ್ಬಲ್ ಬಳಸಿ ಕಟ್ಟಡ ಕಟ್ಟಿದರೆ ಪ್ರತಿ ಚದರಡಿಗೆ ₹ 2000–2500 ವೆಚ್ಚವಾಗುತ್ತದೆ. ಇಲ್ಲಿ ಚದರಡಿಗೆ ₹1500 ದುರುಪಯೋಗವಾಗಿದೆ. ಜನರ ದುಡ್ಡನ್ನು ಕೊಳ್ಳೆ ಹೊಡೆಯುವವರನ್ನು ಕ್ಷಮಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.

‘ಈಗಾಗಲೇ ವಿಟಿಯು ಹಿಂದಿನ ಕುಲಪತಿ ಮಹೇಶಪ್ಪ ಅವರನ್ನು ಅಮಾನತು ಮಾಡುವ ಜತೆಗೆ ಕಾರ್ಯಕಾರಿ ಸಮಿತಿ ಸದಸ್ಯರ ವಿರುದ್ಧ ಕೂಡ ಕ್ರಮ ಜರುಗಿಸಲಾಗುತ್ತಿದೆ.

ವಿಟಿಯು ಅಕ್ರಮಗಳ ಕುರಿತು ತನಿಖೆ ನಡೆಸಿದ ರಾಜ್ಯ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್. ಕೇಶವನಾರಾಯಣ ನೇತೃತ್ವದ ಏಕ ಸದಸ್ಯ ಸಮಿತಿ ನೀಡಿರುವ ವರದಿ ಶೀಘ್ರದಲ್ಲಿಯೇ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಸಚಿವರ ಭೇಟಿ ವೇಳೆ ಜಿಲ್ಲಾಧಿಕಾರಿ ದೀಪ್ತಿ ಕಾನಡೆ, ವಿಟಿಯು ಹಂಗಾಮಿ ಕುಲಪತಿ ವಿ. ಶ್ರೀಧರ್, ಕುಲಸಚಿವ ಜಗನ್ನಾಥ್ ರೆಡ್ಡಿ ಮತ್ತು ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.

ಇಲ್ಲಿಗಾ? ಅಲ್ಲಿಗಾ?: ಕೋಲಾರ ತಾಲ್ಲೂಕಿನ ಮಂಗಸಂದ್ರ ಬಳಿ ಇರುವ ಬೆಂಗಳೂರು ಸ್ನಾತಕೋತ್ತರ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರೋಗ್ಯ ಸಚಿವ ಕೆ.ಆರ್.ರಮೇಶ್ ಕುಮಾರ್ ಅವರು ತಾತ್ಕಾಲಿಕವಾಗಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಉತ್ತರ ವಿವಿಯನ್ನು ಕೋಲಾರ ಸ್ನಾತಕೋತ್ತರ ಕೇಂದ್ರದ ಹೊಸ ಕಟ್ಟಡ ಪೂರ್ಣಗೊಂಡ ಕೂಡಲೇ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದರು.

ಹೊಸ ವಿಶ್ವವಿದ್ಯಾಲಯ ಮುದ್ದೇನಹಳ್ಳಿಯ ವಿಟಿಯು ಸ್ನಾತಕೋತ್ತರ ಕೇಂದ್ರದಲ್ಲಿ ಆರಂಭಗೊಳ್ಳುತ್ತಾ ಅಥವಾ ಕೋಲಾರ ಸ್ನಾತಕೋತ್ತರ ಕೇಂದ್ರದ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತದೆಯೇ ಎಂಬುದು ಸದ್ಯ ಕುತೂಹಲದ ಪ್ರಶ್ನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.