ಗುರುವಾರ , ನವೆಂಬರ್ 14, 2019
22 °C

ಮುಷರಫ್ ಬಂಧನ

Published:
Updated:
ಮುಷರಫ್ ಬಂಧನ

ಇಸ್ಲಾಮಾಬಾದ್ (ಪಿಟಿಐ/ಐಎಎನ್‌ಎಸ್) : ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.ಇಸ್ಲಾಮಾಬಾದ್ ಹೊರವಲಯದ ಚಕ್ ಶಾಹಜದ್‌ನಲ್ಲಿರುವ ಅವರ ತೋಟದ ಮನೆಯಿಂದ ಶುಕ್ರವಾರ ಬೆಳಿಗ್ಗೆ ಮುಷರಫ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.ಇದೇ ವೇಳೆ ಪೊಲೀಸ್ ಅಧಿಕಾರಿಗಳು ಮುಷರಫ್ ಅವರಿಗೆ ಜೀವಬೆದರಿಕೆ ಇರುವುದರಿಂದ ಭದ್ರತಾ ಕಾರಣಗಳಿಗಾಗಿ ಅವರ ಮನೆಯನ್ನೆ ಉಪಕಾರಗೃಹವನ್ನಾಗಿ ಪರಿಗಣಿಸಬೇಕೆಂದು ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ನ್ಯಾಯಾಧೀಶರು ಅವರನ್ನು ಪೊಲೀಸ್ ವಶಕ್ಕೆ ಒಪ್ಪಿಸಿ ಮುಂದಿನ 2 ದಿನಗಳಲ್ಲಿ ಭಯೋತ್ಪಾದನಾ ವಿರೋಧಿ ನ್ಯಾಯಾಲಯದ ಎದುರು ಹಾಜರುಪಡಿಸುವಂತೆ ಸೂಚಿಸಿದರೆಂದು ಮೂಲಗಳು ತಿಳಿಸಿವೆ.ಗುರುವಾರವಷ್ಟೆ ಪ್ರಕರಣವೊಂದರ ಸಂಬಂಧ ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಹೈಕೋರ್ಟ್‌ಗೆ ಹಾಜರಾಗಿದ್ದ ಮುಷರಫ್ ಅವರ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು ತಕ್ಷಣ ಬಂಧಿಸುವಂತೆ ಆದೇಶಿಸಿದ್ದರು. ಆದರೆ ಮುಷರಫ್ ತಮ್ಮ ಅಂಗರಕ್ಷಕ ಪಡೆಯೊಂದಿಗೆ ಅಲ್ಲಿಂದ ಪಲಾಯನ ಮಾಡಿದ್ದರು.

ಪ್ರತಿಕ್ರಿಯಿಸಿ (+)