ಮಂಗಳವಾರ, ಮೇ 11, 2021
19 °C

ಮುಷರಫ್ ರಾಜದ್ರೋಹ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ರಾಜದ್ರೋಹ ಸಂಬಂಧ ಮಾಜಿ ಸೇನಾ ಆಡಳಿತಗಾರ ಪರ್ವೇಜ್ ಮುಷರಫ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ತಿಳಿಸಿದ್ದಾರೆ.ಪ್ರಧಾನಿ ಹುದ್ದೆ ಸ್ವೀಕರಿಸಿದ ಕೇವಲ ಮೂರು ವಾರಗಳ ಬಳಿಕ ಸಂಸತ್ತಿನಲ್ಲಿ (ನ್ಯಾಷನಲ್ ಅಸೆಂಬ್ಲಿ)  ನವಾಜ್ ಷರೀಫ್ ಸೋಮವಾರ ಈ ವಿಷಯ ಘೋಷಿಸಿದ್ದಾರೆ. ಸದ್ಯ ಗೃಹಬಂಧನದಲ್ಲಿರುವ 69 ವರ್ಷದ ಮುಷರಫ್ ಅವರು ಸಂವಿಧಾನವನ್ನು ಬುಡಮೇಲು ಮಾಡಿ ಅಧಿಕಾರಕ್ಕೆ ಏರಿರುವುದು ಸೇರಿದಂತೆ ರಾಜದ್ರೋಹದ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಸಂಬಂಧ ಅವರನ್ನು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಡಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.`ಮುಷರಫ್ ಅವರು 2007ರಲ್ಲಿ ಪಾಕಿಸ್ತಾನದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಇದು ದೇಶದ ಸಂವಿಧಾನದ 6ನೇ ಕಲಂ ಪ್ರಕಾರ ರಾಜದ್ರೋಹ' ಎಂದು ವಿವರಿಸಿದ್ದಾರೆ.ಒಂದುವೇಳೆ ಮುಷರಫ್ ವಿರುದ್ಧದ ರಾಜದ್ರೋಹದ ಆರೋಪ ಸಾಬೀತಾದರೆ ಜೀವಾವಧಿ ಶಿಕ್ಷೆಗೆ ಗುರಿಯಾಗಬಹುದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರದ ಒಳಗೆ ವಿಸ್ತೃತ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಅಟಾರ್ನಿ ಜನರಲ್‌ಗೆ ಸೂಚಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.