ಮಂಗಳವಾರ, ಜೂನ್ 15, 2021
27 °C

ಮುಷ್ಕರ ಕೈಬಿಡುವಂತೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಮಾಜ ಮತ್ತು ಕಕ್ಷಿದಾರರ ಹಿತದೃಷ್ಟಿಯಿಂದ ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ಕಾನೂನು ಸಚಿವ ಎಸ್.ಸುರೇಶ್‌ಕುಮಾರ್ ಅವರು ವಕೀಲರಿಗೆ ಮನವಿ ಮಾಡಿದರು.ಮುಷ್ಕರನಿರತ ವಕೀಲರನ್ನು ಬುಧವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದ ಅವರು, ಮುಷ್ಕರದಿಂದ ಕಕ್ಷಿದಾರರಿಗೆ ತೊಂದರೆಯಾಗುತ್ತಿದೆ. ಅಲ್ಲದೆ ವಕೀಲರ ಬದುಕಿನ ಪ್ರಶ್ನೆಯೂ ಇದರಲ್ಲಿ ಅಡಗಿದೆ. ಕೆಲವೇ ವಕೀಲರ ಹಟದಿಂದಾಗಿ, ಸಾವಿರಾರು ವಕೀಲರ ಬದುಕಿಗೆ ತೊಂದರೆಯನ್ನುಂಟು ಮಾಡುವುದು ಸರಿಯಲ್ಲ ಎಂದು ಮನವರಿಕೆ ಮಾಡಿಕೊಟ್ಟರು.ಇದಾದ ನಂತರ ಸುರೇಶ್‌ಕುಮಾರ್ ಅವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಂಜಿತ್ ಸೇನ್ ಅವರನ್ನು ಭೇಟಿಯಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳು, ವಕೀಲರೊಂದಿಗೆ ನಡೆಸಿದ ಚರ್ಚೆ ಬಗ್ಗೆ ವಿವರಿಸಿದರು.ಇದೇ ತಿಂಗಳ ಎರಡರಂದು ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳು, ಪೊಲೀಸರು ಮತ್ತು ವಕೀಲರ ನಡುವೆ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ಆರ್.ಕೆ.ದತ್ತ ಅವರು ಈಗಾಗಲೇ ಆಂತರಿಕ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ವರದಿ ನೀಡಲಿದ್ದಾರೆ. ಇದನ್ನು ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.