ಮಂಗಳವಾರ, ಮೇ 17, 2022
27 °C

ಮುಷ್ಕರ: 45 ಸಾವಿರ ಮರಳು ಲಾರಿ ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಮಗ್ರ ಮರಳು ನೀತಿ ರೂಪಿಸುವಂತೆ ಆಗ್ರಹಿಸಿ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರ್‌ಗಳ ಒಕ್ಕೂಟ ನಡೆಸುತ್ತಿರುವ ಮರಳು ಲಾರಿ ಮುಷ್ಕರ ಮೂರನೇ ದಿನಕ್ಕೆ ಕಾಲಿರಿಸಿದ್ದು ನಗರದ ಸುಮಾರು 9 ಸಾವಿರ ಮರಳು ಲಾರಿಗಳು ಹಾಗೂ ಮೈಸೂರು, ಮಂಡ್ಯ, ಹುಬ್ಬಳ್ಳಿ, ಹಾಸನ, ಹಾವೇರಿ ಸೇರಿದಂತೆ ರಾಜ್ಯದ ಸುಮಾರು 36 ಸಾವಿರ ಮರಳು ಲಾರಿಗಳು ರಸ್ತೆಗೆ ಇಳಿಯಲಿಲ್ಲ.ಮುಷ್ಕರದಿಂದಾಗಿ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಮಾತ್ರವಲ್ಲದೆ ಮರಳು ಉದ್ಯಮವನ್ನು ಅವಲಂಬಿಸಿರುವ ಕೂಲಿ ಕಾರ್ಮಿಕರು ಹಾಗೂ ಅವರ ಕುಟುಂಬ ಸದಸ್ಯರು ಪರದಾಡುವಂತಾಗಿದೆ. `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಒಕ್ಕೂಟದ ಕಾರ್ಯದರ್ಶಿ ಬಿ.ವಿ.ನಾರಾಯಣಪ್ಪ, `ಈವರೆಗೆ ಸರ್ಕಾರ ಒಕ್ಕೂಟದೊಂದಿಗೆ ಮಾತುಕತೆ ನಡೆಸಿಲ್ಲ~ ಎಂದರು.`ಸಾರ್ವಜನಿಕರಿಗೆ ತೊಂದರೆ ಆಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಮಾತುಕತೆಗೆ ಮುಂದಾಗಬೇಕು. ಮಿತಿ ಮೀರಿ ದಂಡ ವಿಧಿಸುವುದನ್ನು ಸರ್ಕಾರ ಕೈ ಬಿಟ್ಟು ಅಧಿಕಾರಿಗಳ ಶೋಷಣೆ ತಪ್ಪಿಸಬೇಕು~ ಎಂದು ಒತ್ತಾಯಿಸಿದರು.`ಒಂದು ವೇಳೆ ಸರ್ಕಾರ ಚರ್ಚೆಗೆ ಸಿದ್ಧವಾಗದಿದ್ದರೆ ಅನಿರ್ದಿಷ್ಟಾವಧಿ ಯವರೆಗೆ ಮುಷ್ಕರ ನಡೆಸಲಾಗುವುದು. ಇದಕ್ಕಾಗಿ ಒಕ್ಕೂಟ ಸಿದ್ಧತೆ ನಡೆಸಿದೆ. ಸರ್ಕಾರ ನಮ್ಮ ಸಮಸ್ಯೆಗಳನ್ನು ಪರಿಹರಿಸದಿದ್ದರೆ ಒಂದೆರಡು ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ~ ಎಂದು ಅವರು ಎಚ್ಚರಿಕೆ ನೀಡಿದರು.ಈ ಮಧ್ಯೆ ನಗರದ ಮೈಸೂರು ರಸ್ತೆಯಲ್ಲಿ ಮರಳು ಕೂಲಿ ಕಾರ್ಮಿಕರಿಗೆ ಒಕ್ಕೂಟ ಊಟದ ವ್ಯವಸ್ಥೆ ಕಲ್ಪಿಸಿತ್ತು. ಮುಷ್ಕರ ನಡೆಯುವವರೆಗೂ ಕೂಲಿ ಕಾರ್ಮಿಕರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಒಕ್ಕೂಟ ತಿಳಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.