ಮಂಗಳವಾರ, ಏಪ್ರಿಲ್ 13, 2021
32 °C

ಮೂಡಿಗೆರೆ: ಇನ್ಸ್‌ಪೆಕ್ಟರ್ ಅಮಾನತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಎಂಆರ್‌ಪಿಎಲ್ ಕೊಳವೆ ಮಾರ್ಗದಿಂದ ಡೀಸೆಲ್ ಕಳವು ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ ಚಿಕ್ಕಮಗಳೂರು ಸರ್ಕಲ್ ಇನ್ಸ್‌ಪೆಕ್ಟರ್ ಸಿದ್ದಯ್ಯ, ಮೂಡಿಗೆರೆ ಸರ್ಕಲ್ ಇನ್ಸ್‌ಪೆಕ್ಟರ್ ಜಿ.ಟಿ.ಸ್ವಾಮಿ ಅವರನ್ನು ಮಂಗಳೂರು ಐಜಿಪಿ ಅಲೋಕ್‌ಕುಮಾರ್ ಶನಿವಾರ ಅಮಾನತ್ತು ಮಾಡಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ತೈಲ ಸಾಗಿಸುವ ಎಂಆರ್‌ಪಿಎಲ್‌ನ ಕೊಳವೆ ಮಾರ್ಗದಿಂದ ಮೂಡಿಗೆರೆ ತಾಲ್ಲೂಕಿನ ಗೋಣೀಬೀಡು ಪೊಲೀಸ್ ಠಾಣೆಯ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕೋಟ್ಯಂತರ ರೂ ಮೌಲ್ಯದ ಡೀಸೆಲ್ ಕಳವು ಮಾಡಲಾಗಿತ್ತು.ಇಡೀ ಪ್ರಕರಣದಲ್ಲಿ ಅಧಿಕಾರಿಗಳ ಪಾತ್ರದ ಬಗ್ಗೆ ಡಿವೈಎಸ್‌ಪಿ ವೇದಮೂರ್ತಿ ಅವರು ಉನ್ನತ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣೀಬೀಡು ಠಾಣಾಧಿಕಾರಿ ಸುನಿಲ್ ಕುಮಾರ್ ಅವರನ್ನು ಈ ಹಿಂದೆ ಅಮಾನತ್ತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.