ಮೂಡಿಗೆರೆ: ಪ್ಲಾಸ್ಟಿಕ್ ಬಳಕೆ, ಮಾರಾಟ ನಿಷೇಧ

ಮಂಗಳವಾರ, ಜೂಲೈ 16, 2019
25 °C

ಮೂಡಿಗೆರೆ: ಪ್ಲಾಸ್ಟಿಕ್ ಬಳಕೆ, ಮಾರಾಟ ನಿಷೇಧ

Published:
Updated:

ಮೂಡಿಗೆರೆ: ತಾಲ್ಲೂಕು ಆಡಳಿತ, ಜನಪ್ರತಿನಿಧಿಗಳು, ಸಾರ್ವಜನಿಕ ಸಂಘ ಸಂಸ್ಥೆಗಳ ಮನವಿ, ಸುಪ್ರಿಂ ಕೋರ್ಟ್ ಆದೇಶದಂತೆ ತಾಲ್ಲೂಕಿನಲ್ಲಿ ಜೂನ್ 15ರಿಂದ ಎಲ್ಲ ರೀತಿಯ ಪ್ಲಾಸ್ಟಿಕ್ ಬಳಕೆ, ತಯಾರಿಕೆ ಮತ್ತು ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ.ತಾಲ್ಲೂಕಿನ ಕಳಸ, ಗೋಣಿ ಬೀಡು,ಬಣಕಲ್, ಕೊಟ್ಟಿಗೆಹಾರ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಸಂಘಟನೆಗಳು ಪ್ಲಾಸ್ಟಿಕ್ ನಿಷೇಧಗೊಳಿಸುವಂತೆ ಹಲವು ಬಾರಿ ಪ್ರತಿಭಟನೆ ನಡೆಸಿದ್ದು, ಜನರಲ್ಲಿ ಜಾಗೃತಿ ಮೂಡಿಸಿವೆ.

ಆ ಮೂಲಕ ತಾಲ್ಲೂಕು ಆಡ ಳಿತ ಇದೇ 15ರಿಂದ ಪಟ್ಟಣ ಸೇರಿ ತಾಲ್ಲೂಕಿನ ಎಲ್ಲ ಸ್ಥಳದಲ್ಲಿ ಎಲ್ಲ ಹಂತದ ಪ್ಲಾಸ್ಟಿಕ್ ತಯಾರಿಕೆ,ಮಾರಾಟ ಮತ್ತು ಬಳಕೆ ನಿಷೇಧಿಸಿದೆ.ಪರಿಸರ ಸಂರಕ್ಷಣೆ ಹಿತದೃಷ್ಟಿ ಯಿಂದ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ, ಪರ್ಯಾಯ ವ್ಯವಸ್ಥೆ ಅಳವಡಿಸಿ ಕೊಳ್ಳುವುದು ಅಗತ್ಯ ಎಂದು ತಹಸೀ ಲ್ದಾರ್ ಶಿವೇಗೌಡ ತಾಲ್ಲೂಕಿನ ಜನತೆಯಲ್ಲಿ ಮನವಿ ಮಾಡಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry