ಮೂರು ಅತ್ಯಾಚಾರ ಪ್ರಕರಣಗಳು ವರದಿ

7

ಮೂರು ಅತ್ಯಾಚಾರ ಪ್ರಕರಣಗಳು ವರದಿ

Published:
Updated:
ಮೂರು ಅತ್ಯಾಚಾರ ಪ್ರಕರಣಗಳು ವರದಿ

ಮುಂಬೈ (ಪಿಟಿಐ): ಇಲ್ಲಿನ ಜೂಹೂ ಪ್ರದೇಶದ ನರ್ಸರಿ ಶಾಲೆಯ ನಾಲ್ಕು ವರ್ಷದ ಬಾಲಕಿ ಮೇಲೆ ಅದೇ ಶಾಲೆಯ ಬಸ್ ಚಾಲಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಬಸ್ ಚಾಲಕನನ್ನು ರಮೇಶ್ ರಾಜಪೂತ್ (35) ಎಂದು ಗುರುತಿಸಲಾಗಿದ್ದು, ಇತನು ಶಾಲಾ ಮಕ್ಕಳನ್ನು ಮನೆಗೆ ಬಿಟ್ಟು ಹಿಂತಿರುಗುವಾಗ ಕೊನೆಯಲ್ಲಿ ಬಾಲಕಿ ಒಬ್ಬಳೇ ಇರುವುದನ್ನು ಗಮನಿಸಿದ ಚಾಲಕನು ಈ ಕೃತ್ಯ ಎಸಗಿದ್ದಾನೆ.ಆತನ ಮೇಲೆ ಅತ್ಯಾಚಾರ ಪ್ರಕರಣವನ್ನು ದಾಖಲು ಮಾಡಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸತ್ಯಪಾಲ ಸಿಂಗ್ ಶನಿವಾರ ತಿಳಿಸಿದ್ದಾರೆ.

ಅತ್ಯಾಚಾರ: ಅಧಿಕಾರಿ ಬಂಧನ

ನವದೆಹಲಿ ವರದಿ:
ತನ್ನ ಸಹಾಯಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇಂದ್ರ  ಜಲಸಂಪನ್ಮೂಲ ಆಯೋಗದ ಹಿರಿಯ ಅಧಿಕಾರಿಯೊಬ್ಬರನ್ನು ದೆಹಲಿಯ  ಪೊಲೀಸರು ಬಂಧಿಸಿದ್ದಾರೆ.ಅಧಿಕಾರಿಯು ತನ್ನ ಸಹಾಕಿಯ ಮೇಲೆ ಕಳೆದ ಒಂದು ವರ್ಷ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುವುದರ ಜೊತೆಗೆ ಅತ್ಯಾಚಾರ ನಡೆಸುತ್ತಾ ಬಂದಿದ್ದಾನೆ. ದಿನದಿಂದ ದಿನಕ್ಕೆ ಆತನ ಕಿರುಕುಳ ಹೆಚ್ಚಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಅತ್ಯಾಚಾರಕ್ಕೊಳಗಾದ ಯುವತಿಯು ದೂರ ನೀಡಿದ್ದರಿಂದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜಿಂದ್ (ಹರಿಯಾಣ) ವರದಿ: 16 ವರ್ಷದ ಯುವತಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.ಯುವಕನನ್ನು ಸಂಜಯ್ ಎಂದು ಗುರುತಿಸಲಾಗಿದ್ದು, ಆತನು ತನ್ನದೇ ಗ್ರಾಮದ ಯುವತಿಯು ಆಕೆ ಒಂಟಿಯಾಗಿ ತನ್ನ ಮನೆಯಲ್ಲಿದ್ದಾಗ ಈ ಕೃತ್ಯ ಎಸಗಿದ್ದಾನೆ. ಯುವತಿಯ ದೂರಿನ ಆಧಾರದ ಮೇಲೆ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry