ಮಂಗಳವಾರ, ಮಾರ್ಚ್ 9, 2021
23 °C

ಮೂರು ಅಪಘಾತ: 10 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೂರು ಅಪಘಾತ: 10 ಸಾವು

ಯಲಬುರ್ಗಾ/ಮೊಳಕಾಲ್ಮುರು /ಮದ್ದೂರು: ಗುರುವಾರ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 10 ಮಂದಿ ಮೃತಪಟ್ಟಿದ್ದಾರೆ.ಲಾರಿ ಮತ್ತು ಟೆಂಪೊ ಟ್ರಾವೆಲರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಯಲಬುರ್ಗಾ ತಾಲ್ಲೂಕು ಮ್ಯಾದನೇರಿ ಕ್ರಾಸ್‌ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ತಡರಾತ್ರಿ ಘಟನೆ ನಡೆದಿದೆ.ಚಳ್ಳಕೆರೆ ತಾಲ್ಲೂಕಿನ ಹಿರೇಹಳ್ಳಿಯಲ್ಲಿ   ಬುಧವಾರ ಮಧ್ಯರಾತ್ರಿ ಸಿಮೆಂಟ್ ಚೀಲಗಳನ್ನು ತುಂಬಿಕೊಂಡು ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟು ಆರು ಮಂದಿ  ಗಾಯಗೊಂಡಿದ್ದಾರೆ.ನದಿಗೆ ಬಸ್‌: ಚಾಲಕನ ನಿಯಂತ್ರಣ ತಪ್ಪಿದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಮದ್ದೂರು ಸಮೀಪದ ಸೋಮನಹಳ್ಳಿ ಬಳಿ ಗುರುವಾರ ಮಧ್ಯಾಹ್ನ

ಶಿಂಷಾ ನದಿಗೆ ಉರುಳಿ ಒಬ್ಬ ಪ್ರಯಾಣಿಕ ಮೃತಪಟ್ಟು, 38 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸುಮಾರು 80 ಅಡಿ ಆಳಕ್ಕೆ ಬಸ್‌ ಉರುಳಿ ಬಿದ್ದಿದೆ. ಬಸ್ ಅನ್ನು ಕ್ರೇನ್ ಮೂಲಕ ಎತ್ತಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.