ಬುಧವಾರ, ಮೇ 25, 2022
22 °C

ಮೂರು ಕ್ಷೇತ್ರಗಳಿಗೆ 69 ನಾಮಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚನ್ನಪಟ್ಟಣ, ಬಂಗಾರಪೇಟೆ ಮತ್ತು ಜಗಳೂರು ವಿಧಾನಸಭಾ ಕ್ಷೇತ್ರಕ್ಕೆ ಏಪ್ರಿಲ್ 9ರಂದು ನಡೆಯುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಬುಧವಾರ ಅಂತ್ಯಗೊಂಡಿದೆ. ಮೂರು ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳೂ ಸೇರಿದಂತೆ ಒಟ್ಟು 69 ನಾಮಪತ್ರಗಳು ಸಲ್ಲಿಕೆಯಾಗಿವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.



ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ರಘುನಂದನ್ ರಾಮಣ್ಣ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೋರೇಗೌಡ ಅವರೂ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸಿಂ.ಲಿಂ.ನಾಗರಾಜ್ ಬುಧವಾರ ನಾಮಪತ್ರ ಸಲ್ಲಿಸಿದರು. ಜಗಳೂರು ಮತ್ತು ಬಂಗಾರಪೇಟೆ ಕ್ಷೇತ್ರಗಳಲ್ಲೂ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಬುಧವಾರವೇ ನಾಮಪತ್ರ ಸಲ್ಲಿಸಿದರು. ಜಗಳೂರಿನಲ್ಲಿ ಎಸ್.ವಿ.ರಾಮಚಂದ್ರ ಬಿಜೆಪಿ ಅಭ್ಯರ್ಥಿಯಾಗಿ  ನಾಮಪತ್ರ ಸಲ್ಲಿಸಿದರು.

ಗುರುವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ಶನಿವಾರ ನಾಮಪತ್ರ ಹಿಂದಕ್ಕೆ ಪಡೆಯಲು ಕಡೆಯ ದಿನ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.