ಶನಿವಾರ, ಏಪ್ರಿಲ್ 17, 2021
32 °C

ಮೂರು ಕ್ಷೇತ್ರಗಳ ಉಪಚುನಾವಣೆ: ಶೇ 60ರಷ್ಟು ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು (ಐಎಎನ್‌ಎಸ್): ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಸುಮಾರು ಐದು ಲಕ್ಷ ಮತದಾರರು (ಶೇ 60) ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಇಲಾಖೆ ಮೂಲಗಳು ತಿಳಿಸಿವೆ.

ದಾವಣಗೆರೆ ಜಿಲ್ಲೆಯ ಜಗಳೂರು, ಕೋಲಾರದ ಬಂಗಾರಪೇಟೆ ಹಾಗೂ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾಕ್ಷೇತ್ರದಲ್ಲಿ ನಡೆದ ಮತದಾನ ಸಂಪೂರ್ಣವಾಗಿ ಶಾಂತಿಯುತವಾಗಿತ್ತು ಎಂದು ರಾಜ್ಯ ಚುನಾವಣಾ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮೇ 13ರಂದು ನಡೆಯಲಿದೆ.

ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಮ್ಮ ಪ್ರತಿಷ್ಠೆಯನ್ನು ಪಣಕ್ಕಿಟ್ಟಿವೆ. ಆಪರೇಷನ್ ಕಮಲದಿಂದ ಇಬ್ಬರು ಕಾಂಗ್ರೆಸಿಗರು ಹಾಗೂ ಒಬ್ಬರು ಜೆಡಿಎಸ್‌ನ ಸದಸ್ಯರು ಬಿಜೆಪಿ ಸೇರಿದ್ದರು. ಈ ಹಿನ್ನೆಯಲ್ಲಿ ನಡೆದ ಉಪಚುನಾವಣೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರತಿಷ್ಠೆಯ ಕಣವಾಗಿದೆ.

ಕಳೆದ ಮೂರು ವರ್ಷಗಳಲ್ಲಿ ಚನ್ನಪಟ್ಟಣದಲ್ಲಿ ಮೂರು ಬಾರಿ ಚುನಾವಣೆ ನಡೆದಿದೆ. 2008ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಸಿ.ಪಿ.ಯೋಗೇಶ್ವರ್ ಗೆದ್ದು ನಂತರ ಬಿಜೆಪಿ ಪಾಲಾದರು. ನಂತರ ನಡೆದ  ಚುನಾವಣೆಯಲ್ಲಿ ಜೆಡಿಎಸ್‌ನ ಎಂ.ಸಿ.ಅಶ್ವತ್ಥ ಗೆದ್ದಿದ್ದರು. ಅವರೂ ಬಿಜೆಪಿಗೆ ಸೇರಿದ್ದರಿಂದ ಈಗ ಮತ್ತೊಮ್ಮೆ ಕ್ಷೇತ್ರದ ಮತದಾರರು ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗಿದೆ. ಈ ಬಾರಿಯೂ ಸಿ.ಪಿ.ಯೋಗೇಶ್ವರ್ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಇವರೊಂದಿಗೆ ಜಗಳೂರಿನಲ್ಲಿ ಎಸ್.ವಿ.ರಾಮಚಂದ್ರ ಹಾಗೂ ಬಂಗಾರಪೇಟೆಯಿಂದಎಂ.ನಾರಾಯಣಸ್ವಾಮಿ ಅವರನ್ನು ಮತದಾರರು ಗೆಲ್ಲಿಸುವರೇ ಎಂದು ಕಾದು ನೋಡಬೇಕಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.