ಶುಕ್ರವಾರ, ಏಪ್ರಿಲ್ 16, 2021
31 °C

ಮೂರು ಕ್ಷೇತ್ರ: ಏ.9ಕ್ಕೆ ಮರು ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆಯಿಂದಾಗಿ 2010ರ ಅಕ್ಟೋಬರ್‌ನಿಂದ ತೆರವಾಗಿದ್ದ ಚನ್ನಪಟ್ಟಣ, ಜಗಳೂರು (ಪರಿಶಿಷ್ಟ ಪಂಗಡ) ಮತ್ತು ಬಂಗಾರಪೇಟೆ (ಪರಿಶಿಷ್ಟ ಜಾತಿ) ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದೆ. ಆದರೆ ಒಂದು ತಿಂಗಳ ಬಳಿಕ ಮತ ಎಣಿಕೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.ಮೂರು ಕ್ಷೇತ್ರಗಳ ಉಪ ಚುನಾವಣೆ ಸಂಬಂಧ ಕೇಂದ್ರ ಚುನಾವಣಾ ಆಯೋಗ ಶನಿವಾರ ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಬುಧವಾರ (ಮಾರ್ಚ್ 16) ಆರಂಭವಾಗುವ ಚುನಾವಣಾ ಪ್ರಕ್ರಿಯೆ ಮೇ 13ಕ್ಕೆ ಅಂತ್ಯಗೊಳ್ಳಲಿದೆ.16 ಶಾಸಕರು ಬೆಂಬಲ ಹಿಂದಕ್ಕೆ ಪಡೆದ ಕಾರಣದಿಂದ 2010ರ ಅಕ್ಟೋಬರ್‌ನಲ್ಲಿ ಬಿಜೆಪಿ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತು. ಈ ಸಂದರ್ಭದಲ್ಲಿ ಪ್ರತಿಪಕ್ಷಗಳ ಸದಸ್ಯ ಬಲ ಕುಗ್ಗಿಸಲು ಬಿಜೆಪಿ ‘ಆಪರೇಷನ್ ಕಮಲ’ ಕಾರ್ಯಾಚರಣೆ ನಡೆಸಿತ್ತು. ಆಗ ಚನ್ನಪಟ್ಟಣದ ಜೆಡಿಎಸ್ ಶಾಸಕ ಎಂ.ಸಿ.ಅಶ್ವತ್ಥ್, ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದ ಜಗಳೂರಿನ ಎಸ್.ವಿ.ರಾಮಚಂದ್ರ ಮತ್ತು ಬಂಗಾರಪೇಟೆಯ ಎಂ.ನಾರಾಯಣಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.ನೀತಿ ಸಂಹಿತೆ ಜಾರಿ: ಚುನಾವಣೆ ನಡೆಯುವ ರಾಮನಗರ, ದಾವಣಗೆರೆ ಮತ್ತು ಕೋಲಾರ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದಲೇ ಮಾದರಿ ನೀತಿಸಂಹಿತೆ ಜಾರಿಯಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈ ನೀತಿಸಂಹಿತೆ ಅನ್ವಯವಾಗಲಿದೆ.ಚುನಾವಣಾ ವೇಳಾಪಟ್ಟಿ

*  ಅಧಿಸೂಚನೆ ಪ್ರಕಟ- ಮಾರ್ಚ್ 16

*  ನಾಮಪತ್ರ ಸಲ್ಲಿಸಲು ಕೊನೆದಿನ- ಮಾ. 23

*  ನಾಮಪತ್ರಗಳ ಪರಿಶೀಲನೆ- ಮಾ. 24

*  ಹಿಂಪಡೆಯಲು ಕೊನೆದಿನ- ಮಾ. 26

*  ಮತದಾನ ನಡೆಯುವ ದಿನ- ಏಪ್ರಿಲ್ 9

*  ಮತ ಎಣಿಕೆ- ಮೇ 13

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.