ಭಾನುವಾರ, ಮೇ 16, 2021
23 °C

ಮೂಲಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣರಾಜಪುರ: ಸೀಗೇಹಳ್ಳಿ ಮತ್ತು ಪ್ರಿಯಾಂಕನಗರ ವ್ಯಾಪ್ತಿ ಗ್ರಾಮಗಳಿಗೆ ಮೂಲಸೌಕರ್ಯ ನೀಡುವಂತೆ ಒತ್ತಾಯಿಸಿ ಕರ್ನಾಟಕ ಜನಾಂದೋಲನ ಸಂಘಟನೆ ಕಾರ್ಯಕರ್ತರು ಸಂತೆ ಮೈದಾನದಿಂದ ತಾಲ್ಲೂಕು ಕಚೇರಿ ವರೆಗೆ ಮಂಗಳವಾರ ಜಾಥಾ ನಡೆಸಿ ಪ್ರತಿಭಟಿಸಿದರು.ರಾಜ್ಯ ಘಟಕದ ಅಧ್ಯಕ್ಷ ಕೆ.ಮರಿಯಪ್ಪ ಅವರು ಸರ್ಕಾರಿ ಭೂಮಿಯಲ್ಲಿ ಈಗಾಗಲೇ ಮನೆಗಳನ್ನು ಕಟ್ಟಿಕೊಂಡು ವಾಸಿಸುವ ಬಡವರನ್ನು ಒಕ್ಕಲೆಬ್ಬಿಸದೆ ಅವರಿಗೆ ಹಕ್ಕುಪತ್ರ ನೀಡಬೇಕು. ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಖಾಸಗಿಯವರ ಕಟ್ಟಡ ನಿರ್ಮಾಣವನ್ನು ನಿಲ್ಲಿಸಬೇಕು ಮತ್ತು ಗ್ರಾಮಗಳಿಗೆ ಕುಡಿಯುವ ನೀರು, ರಸ್ತೆ, ಚರಂಡಿ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು. ತಹಸೀಲ್ದಾರ್ ಶಿವಕುಮಾರ್ ಮತ್ತು ಬಿಬಿಎಂಪಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾರಾಯಣ್ ಅವರಿಗೆ ಈ ಸಂದರ್ಭದಲ್ಲಿ ಮನವಿ ಪತ್ರ ಸಲ್ಲಿಸಿದರು.ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವೆಂಕಟೇಶ್, ಕಾರ್ಮಿಕ ಮುಖಂಡ ವಿಜಯ ಕುಮಾರ್ ಮತ್ತಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.