ಮೂಲಸೌಲಭ್ಯ ಅಭಿವೃದ್ಧಿಗೆ ಕ್ರಮ: ಯಡಿಯೂರಪ್ಪ

ಮಂಗಳವಾರ, ಜೂಲೈ 23, 2019
27 °C

ಮೂಲಸೌಲಭ್ಯ ಅಭಿವೃದ್ಧಿಗೆ ಕ್ರಮ: ಯಡಿಯೂರಪ್ಪ

Published:
Updated:

ಬೆಂಗಳೂರು: ರಾಜ್ಯದ ನ್ಯಾಯಾಲಯಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಆರಂಭಿಸಲಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದಾರೆ.ಕಾನೂನು, ಹಣಕಾಸು ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಗೃಹ ಕಚೇರಿ `ಕೃಷ್ಣಾ~ದಲ್ಲಿ ಬುಧವಾರ ಸಭೆ ನಡೆ ಸಿದ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.ಹೈಕೋರ್ಟ್ ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರು, ವಕೀಲರು ಮತ್ತು ಕಕ್ಷಿದಾರರ ಸಂಖ್ಯೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ಮೂಲಸೌಕರ್ಯ ಅಭಿವೃದ್ಧಿ ಪಡಿಸುವ ಕುರಿತು ಚರ್ಚೆ ನಡೆಸಸಲು ಸಭೆ ಕರೆಯಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry