ಗುರುವಾರ , ನವೆಂಬರ್ 21, 2019
21 °C

ಮೂಲ ಸಮಸ್ಯೆಗೆ ಪರಿಹಾರ-ಬಿಜೆಪಿ

Published:
Updated:

ಗುಬ್ಬಿ: ಜನ ಸಾಮಾನ್ಯರ ಮೂಲ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಎಸ್.ಆರ್.ನಟರಾಜು ತಿಳಿಸಿದರು.

ತಾಲ್ಲೂಕಿನ ನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ ಅವರು, ಗ್ರಾಮೀಣ ಪ್ರದೇಶಗಳ ಅಗತ್ಯ ಮೂಲ ಸಮಸ್ಯೆಗಳಿಗೆ ಹೆಚ್ಚಿನ ಹೊತ್ತು ನೀಡಿದ ರಾಜ್ಯ ಸರ್ಕಾರ ಕುಡಿಯುವ ನೀರು, ವಸತಿ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಒದಗಿಸಿಕೊಟ್ಟಿದೆ ಎಂದರು.ಕ್ಷೇತ್ರದ ಹಾಗಲವಾಡಿ, ದೊಡ್ಡಗುಣಿ, ಕೊಂಡ್ಲಿ, ಶಿವಸಂದ್ರ, ಮುಸಕೊಂಡ್ಲಿ ಹಾಗೂ ಚೇಳೂರು ಹೋಬಳಿಯ ಕೆರೆಗಳಿಗೆ ತ್ವರಿತವಾಗಿ ನೀರಾವರಿ ಯೋಜನೆ ಅನುಷ್ಠಾನಗೊಳಿಸುವುದು. ಹಲ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹಲ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಚಿಂತನೆ ನಡೆಸಿದ್ದು ಮತದಾರರು ಉತ್ತಮ ಸಹಕಾರ ನೀಡುತ್ತಿದ್ದು, ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು.

ಚುನಾವಣಾ ಪ್ರಚಾರಕ್ಕಾಗಿ ಪಕ್ಷದ ಮುಖಂಡರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)