ಸೋಮವಾರ, ಜೂನ್ 14, 2021
22 °C

ಮೂಲ ಸೌಲಭ್ಯಕ್ಕೆ ಮನವಿ ಸಲ್ಲಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: `ಭೂಸ್ವಾಧೀನ ಪ್ರಕ್ರಿಯೆ ಅಡಿ ವಶಪಡಿಸಿಕೊಂಡ ಭೂಮಿ ವಾಪಸ್ ಕೊಡಿಸಿ, ಇಲ್ಲವೆ ಹೆಚ್ಚು ಪರಿಹಾರ ಕೊಡಿಸಿ ಎಂದು ಮನವಿ ಸಲ್ಲಿಸುವುದನ್ನು ಬಿಟ್ಟು, ಗ್ರಾಮೀಣ ಪ್ರದೇಶಗಳಿಗೆ ಮೂಲ ಸೌಲಭ್ಯ ಕಲ್ಪಿಸುವಂತೆ ಮನವಿ ಸಲ್ಲಿಸಿ~ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿಕೊಂಡರು.ಸ್ಥಳೀಯ ಕಂಟೋನ್‌ಮೆಂಟ್ ಪ್ರದೇಶದಲ್ಲಿರುವ ಸರ್ಕಾರಿ ಬಾಲಮಂದಿರದ ಆವರಣದಲ್ಲಿ `ಶಾಂತಿಧಾಮ~ ನಿರ್ಮಾಣ ಕಾಮಗಾರಿಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರಿ ಸುಧಾರಣಾ ಸಂಸ್ಥೆಗಳ ಸಮುಚ್ಚಯಕ್ಕಾಗಿ ರಾಷ್ಟ್ರೀಯ ಗಣಿ ಅಭಿವೃದ್ಧಿ ನಿಗಮ (ಎನ್‌ಎಮ್‌ಡಿಸಿ) 8.5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿರುವುದು ಅಭಿನಂದನೀಯ ಎಂದು ಅವರು ತಿಳಿಸಿದರು.ಸರ್ಕಾರ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬಜೆಟ್‌ನಲ್ಲೇ ಪ್ರತ್ಯೇಕ ಅನುದಾನ ಮೀಸಲಿರಿಸಿ, ಜನರ ಆಶೋತ್ತರಗಳಿಗೆ ಸ್ಪಂದಿಸಲಿದೆ. ದೇಶದ ಬೆನ್ನುಲುಬಾಗಿರುವ ರೈತರ ಅಭ್ಯುದಯಕ್ಕೆ ಅನೇಕ ಯೋಜನೆಗಳನ್ನು ರೂಪಿಸಿದೆ. ಆದರೆ, ರೈತರ ಹೆಸರಲ್ಲಿ ಕೆಲವರು ಭೂಮಿಗೆ ಹೆಚ್ಚು ಹಣ ನೀಡುವಂತೆ ಕೋರುತ್ತಿದ್ದಾರೆ. ಈ ರೀತಿ ಮನವಿ ಸಲ್ಲಿಸದೆ, ಜಿಲ್ಲೆಯ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಬೇಕು ಎಂದರು.ಎನ್‌ಎಮ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಎಲ್.ಎನ್. ಮಾಥುರ್ ಮಾತನಾಡಿ, ಸಂಸ್ಥೆಯು ಗಣಿಗಾರಿಕೆ ಮಾತ್ರವಲ್ಲದೆ, ಉಕ್ಕು ಉತ್ಪಾದನಾ ಸ್ಥಾವರವನ್ನೂ ಸ್ಥಾಪಿಸಲಿದೆ ಎಂದರು.ಶಾಸಕರಾದ ಎಂ.ಎಸ್. ಸೋಮಲಿಂಗಪ್ಪ, ನೇಮರಾಜ ನಾಯ್ಕ, ಮೇಯರ್ ಪಾರ್ವತಿ ಇಂದುಶೇಖರ್, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಕೆ.ರಾಮಲಿಂಗಪ್ಪ, ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ, ಬುಡಾ ಅಧ್ಯಕ್ಷ ವಿನೋದಕುಮಾರ್, ಜಿ.ಪಂ. ಉಪಾಧ್ಯಕ್ಷ ಚೆನ್ನಬಸವನಗೌಡ, ಉಪವಿಭಾಗಾಧಿಕಾರಿ ಶಶಿಕಾಂತ ಸೆಂಥಿಲ್ ಮತ್ತಿತರರು ಉಪಸ್ಥಿತರಿದ್ದರು.ಇದೇ ವೇಳೆ ಮಹಿಳೆಯರಿಗೆ ಭಾಗ್ಯಲಕ್ಷ್ಮಿ ಯೋಜನೆ ಬಾಂಡ್ ವಿತರಿಸಲಾಯಿತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.