ಭಾನುವಾರ, ಜೂನ್ 20, 2021
24 °C
22ರಂದು ಮೈಸೂರು ವಿ.ವಿ ಘಟಿಕೋತ್ಸವ

ಮೂವರಿಗೆ ಗೌರವ ಡಾಕ್ಟರೇಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು:  ಮೈಸೂರು ವಿಶ್ವವಿದ್ಯಾ­ಲಯವು ಈ ಬಾರಿಯ ಗೌರವ ಡಾಕ್ಟರೇಟ್‌ ಪುರಸ್ಕಾರಕ್ಕೆ ಪ್ರಧಾನಮಂತ್ರಿ ಸಾರ್ವಜನಿಕ ಮೂಲಸೌಕರ್ಯ ಮತ್ತು ಸಂಶೋಧನಾ ಸಲಹೆಗಾರ ಸ್ಯಾಮ್‌ ಪಿತ್ರೋಡಾ, ಸಾಹಿತಿ ದೇವನೂರ ಮಹಾದೇವ ಮತ್ತು ನಿವೃತ್ತ ಐಎಎಸ್‌ ಅಧಿಕಾರಿ ಪುಟ್ಟಸೋಮೇಗೌಡ ಅವರನ್ನು ಆಯ್ಕೆ ಮಡಲಾಗಿದೆ ಎಂದು ಕುಲಪತಿ ಪ್ರೊ.ಕೆ.ಎಸ್‌. ರಂಗಪ್ಪ ತಿಳಿಸಿದರು.



ಇಲ್ಲಿನ ಕ್ರಾಫರ್ಡ್‌ ಭವನದಲ್ಲಿ ಮಾರ್ಚ್‌ 22ರಂದು ನಡೆಯಲಿರುವ ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಈ ಮೂವರು ಗಣ್ಯರಿಗೆ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌ ಅವರು ಗೌರವ ಡಾಕ್ಟರೇಟ್‌ ಪ್ರದಾನ ಮಾಡುವರು.



ಸ್ಯಾಮ್‌ ಪಿತ್ರೋಡಾ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಆರ್‌.ವಿ. ದೇಶಪಾಂಡೆ ಪಾಲ್ಗೊಳ್ಳುವರು ಎಂದು ಅವರು ತಿಳಿಸಿದರು.



ದೂರ ಸಂಪರ್ಕ ಕ್ರಾಂತಿಯ ಹರಿಕಾರ ಎಂದು ಸತ್ಯನಾರಾಯಣ ಗಂಗಾರಾಮ್‌ ಪಿತ್ರೋಡಾ ಅವರ ವಿಜ್ಞಾನ ಸೇವೆ, ದೇವನೂರ ಮಹಾದೇವ ಅವರ ಸಾಹಿತ್ಯ ಸೇವೆ ಮತ್ತು ಕೃಷಿ ಫೌಂಡೇಷನ್‌ ಸ್ಥಾಪಕ ನಿವೃತ್ತ ಐಎಎಸ್‌ ಅಧಿಕಾರಿ ವೈ.ಕೆ. ಪುಟ್ಟಸೋಮೇಗೌಡ ಅವರ ಸಮಾಜ ಸೇವೆ ಗುರುತಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.