ಭಾನುವಾರ, ನವೆಂಬರ್ 29, 2020
25 °C

ಮೂವರಿಗೆ ಗೌರವ ಡಾಕ್ಟರೇಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸಾಹಿತಿ ಎಸ್‌.ಎಲ್‌. ಭೈರಪ್ಪ, ಉದ್ಯಮಿ ಅಜೀಂ ಪ್ರೇಮ್‌ಜಿ ಮತ್ತು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.ಇದೇ 17ರಂದು ನಡೆಯುವ ಘಟಿಕೋತ್ಸವದಲ್ಲಿ ಈ  ಮೂವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಗುವುದು. ಭಾರತೀಯ ವಿಜ್ಞಾನ ಸಂಸ್ಥೆ ವಿಶ್ರಾಂತ ನಿರ್ದೇಶಕ ಪ್ರೊ.ಗೋವರ್ಧನ್‌ ಮೆಹ್ತಾ ಘಟಿಕೋತ್ಸವ ಭಾಷಣ ಮಾಡುವರು.ರಾಜ್ಯಪಾಲ ವಜೂಭಾಯಿ ವಾಲಾ, ಸಚಿವ ಆರ್‌.ವಿ. ದೇಶಪಾಂಡೆ ಪಾಲ್ಗೊಳ್ಳುವರು ಎಂದು ಕುಲಪತಿ ಪ್ರೊ.ಕೆ.ಎಸ್‌. ರಂಗಪ್ಪ ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.