ಮೂವರು ಶಂಕಿತ ಉಗ್ರರ ಬಂಧನ

7

ಮೂವರು ಶಂಕಿತ ಉಗ್ರರ ಬಂಧನ

Published:
Updated:

ನವದೆಹಲಿ (ಪಿಟಿಐ): ಕಳೆದ ಎರಡು ತಿಂಗಳ ಹಿಂದೆ ಪುಣೆಯಲ್ಲಿ ನಡೆದಿದ್ದ ಸ್ಫೋಟ ಪ್ರಕರಣದಲ್ಲಿ ಭಾಗವಹಿಸಿದ್ದರು ಎಂದು ಶಂಕೆಯ ಮೇಲೆ ಇಂಡಿಯನ್ ಮುಜಾಹಿದೀನ್ ಸಂಘಟನೆಗೆ ಸೇರಿದ ಮೂವರು ಶಂಕಿತ ಉಗ್ರಗಾಮಿಗಳನ್ನು ವಶಕ್ಕೆ ಪಡೆದಿರುವುದಾಗಿ ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.ಭಯೋತ್ಪಾದನಾ ನಿಗ್ರಹ ದಳ ಬಂಧಿಸಿರುವ ಈ ಮೂವರು ಉಗ್ರರು ತಲೆಮರೆಸಿಕೊಂಡಿರುವ ಉಗ್ರ ಯಾಸಿನ್ ಭಟ್ಕಳ ಜತೆ ನಂಟು ಹೊಂದಿರುವ ಶಂಕೆಯಿದೆ. ಬಂಧಿತರಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್ ಭಟ್ಕಳ ಜತೆ ನಂಟು ಹೊಂದಿದ್ದ ಇಂಡಿಯನ್ ಮುಜಾಹಿದೀನ್ ಸಂಘಟನೆಗೆ ಸೇರಿದ ಮತ್ತೋರ್ವ ಶಂಕಿತ ಉಗ್ರನನ್ನು ಪೊಲೀಸರು ಈಶಾನ್ಯ ದೆಹಲಿಯಲ್ಲಿ ಮಾರ್ಚ್ 27 ರಂದು ಬಂಧಿಸಿ, ಆತನಿಂದ ಒಂದು ಕೆ.ಜಿ ಸ್ಫೋಟಕ ವಸ್ತುಗಳನ್ನು ಹಾಗೂ ಒಂದು ಡಿಟೋನೆಟರ್ ವಶಪಡಿಸಿಕೊಂಡಿದ್ದರು.ಕಳೆದ ಆಗಸ್ಟ್ ತಿಂಗಳಲ್ಲಿ ಪುಣೆಯಲ್ಲಿ ನಡೆದಿದ್ದ ನಾಲ್ಕು ಸಣ್ಣ ಪ್ರಮಾಣದ ಸ್ಫೋಟಗಳಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry