ಮೆಕ್ಕೆಜೋಳ ಬೆಂಬಲಬೆಲೆ ಖರೀದಿ ಕೇಂದ್ರ ಆರಂಭ

7

ಮೆಕ್ಕೆಜೋಳ ಬೆಂಬಲಬೆಲೆ ಖರೀದಿ ಕೇಂದ್ರ ಆರಂಭ

Published:
Updated:

ಚಿತ್ರದುರ್ಗ: ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಚಿತ್ರದುರ್ಗ ಘಟಕದಿಂದ ಜಿಲ್ಲೆಯ ವಿವಿಧೆಡೆ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲಾಗಿದೆ.ಜಿಲ್ಲೆಯ ಚಿತ್ರದುರ್ಗದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣ ಹಾಗೂ ತಾಲ್ಲೂಕಿನ ಭರಮಸಾಗರ ಮತ್ತು ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರಿನ ಉಪ ಮಾರುಕಟ್ಟೆ ಆವರಣದಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ. ಪ್ರತಿ ಕ್ವಿಂಟಲ್‌ಗೆ ರೂ 880ಕ್ಕೆ ಈಗಾಗಲೇ ಮೆಕ್ಕೆಜೋಳ ಖರೀದಿ  ಮಾಡುತ್ತಿದ್ದು, ಜ. 31ರವರೆಗೆ ಮೆಕ್ಕೆಜೋಳ ಖರೀದಿಸಲಾಗುತ್ತದೆ. ಉತ್ತಮ ಗುಣಮಟ್ಟದ ಮೆಕ್ಕೆಜೋಳ ರೈತರಿಂದ ನೇರವಾಗಿ ಖರೀದಿ ಮಾಡಲಾಗುತ್ತದೆ ಎಂದು ಸಹಕಾರ ಮಾರಾಟ ಮಹಾಮಂಡಳಿ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry