ಬೆಂಗಳೂರು: `ನಮ್ಮ ಮೆಟ್ರೊ' ಕಾಮಗಾರಿ ವಿಳಂಬದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರು, ಕಾಮಗಾರಿಗೆ ವೇಗ ನೀಡುವಂತೆ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂ ಆರ್ಸಿಎಲ್) ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಎಂಆರ್ಸಿಎಲ್ ಕೇಂದ್ರ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ `ನಮ್ಮ ಮೆಟ್ರೊ' ಒಂದನೇ ಹಂತ ಹಾಗೂ ಎರಡನೇ ಹಂತದ ಯೋಜನೆಯ ಬಗ್ಗೆ ಪ್ರಾತ್ಯ ಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೆಟ್ರೊ ಎರಡನೇ ಹಂತದ ಯೋಜನೆಗೆ ಇದೇ 25 ರಂದು ಕೇಂದ್ರ ಸಾರ್ವಜನಿಕ ಹೂಡಿಕೆ ಮಂಡಳಿ (ಪಿಐಬಿ) ಯಿಂದ ಅನುಮೋದನೆ ದೊರಕುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಯೋಜ ನೆಯ ಸಮಗ್ರ ಮಾಹಿತಿ ನೀಡಲು ಪ್ರಾತ್ಯಕ್ಷಿಕೆ ಏರ್ಪಡಿ ಸಲಾಗಿತ್ತು.

`ಒಂದನೇ ಹಂತದ ಯೋಜನೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅತೃಪ್ತಿ ವ್ತಕ್ತವಾಗಿರುವುದು ಗಮನಕ್ಕೆ ಬಂದಿದೆ. ಮೂರು ಟೆಂಡರ್ ಪ್ರಕ್ರಿಯೆಯಲ್ಲಿ ಆದ ವಿಳಂಬದಿಂದ ಕಾಮಗಾರಿ ವಿಳಂಬವಾಗಿದೆ. ಇನ್ನು ಮುಂದೆ ಕಾಮಗಾರಿ ವಿಳಂಬವಾಗಲು ಆಸ್ಪದ ನೀಡುವುದಿಲ್ಲ. ನಿಯಮಿತವಾಗಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಲಾಗುವುದು' ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು.

ಮೆಟ್ರೊ ಅಧಿಕಾರಿಗಳು ಆರಂಭದಲ್ಲಿ ಮೊದಲ ಹಂತದ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಬಳಿಕ 2ನೇ ಹಂತದ ಯೋಜನೆಯ ಬಗ್ಗೆ ವಿವರ ನೀಡಿದರು. ಜಯದೇವ ಆಸ್ಪತ್ರೆಯ ಬಳಿ ಮೆಟ್ರೊ ಪಥ ಬದಲಾವಣೆಯಿಂದ ಉಂಟಾಗಿರುವ ವಿವಾದದ ಬಗ್ಗೆ ಹೆಚ್ಚು ಚರ್ಚೆ ನಡೆಯಲಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.