ಶುಕ್ರವಾರ, ಏಪ್ರಿಲ್ 23, 2021
22 °C

ಮೆಟ್ರೊ ಕಾರ್ಮಿಕ ಸಾವು: ಶವ ಪರೀಕ್ಷೆ ವರದಿಗಾಗಿ ನಿರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೆಟ್ರೊ ಕಾಮಗಾರಿ ವೇಳೆ ಮೃತಪಟ್ಟ ಕಾರ್ಮಿಕ ಸಮೀರ್ ಓರನ್ (18) ಸಾವಿನ ಕಾರಣ ಮರಣೋತ್ತರ ಪರೀಕ್ಷೆ ನಂತರ ನಿಖರವಾಗಲಿದೆ ಎಂದು ಮೆಟ್ರೊ ಅಧಿಕಾರಿಗಳು ಹೇಳಿದ್ದಾರೆ.`ಓರನ್ ಅವರು ಶುಕ್ರವಾರ ರಾತ್ರಿ ಸಂಪಿಗೆ ರಸ್ತೆ ಮತ್ತು ನ್ಯಾಷನಲ್ ಕಾಲೇಜು ಮಾರ್ಗದ ಕೆಳಸೇತುವೆ  ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದರು. ಸ್ಥಳದಲ್ಲಿ ಬಲ್ಬ್ ಅಳವಡಿಸುವ ವೇಳೆ ಅವರು ಕುಸಿದು ಬಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಓರನ್ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದರು. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಆತ ಸಾವನ್ನಪ್ಪಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ಗೊತ್ತಾಗಲಿದೆ~ ಎಂದು ಅಧಿಕಾರಿಗಳು ತಿಳಿಸಿದ್ದಾರೆ.`ಕಾಮಗಾರಿಯ ತುಂಡು ಗುತ್ತಿಗೆ ಪಡೆದಿದ್ದ ಕೋಸ್ಟಲ್ ಎಂಬ ಕಂಪೆನಿಯ ಅಧಿಕಾರಿಗಳು ಕಾರ್ಮಿಕ ಓಮರ್‌ನ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ~ ಎಂದು ಅಧಿಕಾರಿಗಳು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.