ಮಂಗಳವಾರ, ಮೇ 18, 2021
28 °C

ಮೆಟ್ರೊ ನಿಲ್ದಾಣ ಸ್ಥಳಾಂತರ: ಬಿಎಂಆರ್‌ಸಿಎಲ್ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ನಮ್ಮ ಮೆಟ್ರೊ ಯೋಜನೆಯ ಎರಡನೇ ಹಂತದಲ್ಲಿ ಜಯದೇವ ವೃತ್ತದ ಬಳಿ ಮೆಟ್ರೊ ನಿಲ್ದಾಣ ಸ್ಥಳಾಂತರ ಹಾಗೂ ಪಥ ಬದಲಾವಣೆಯ ಬಗ್ಗೆ ರಾಜ್ಯ ಸರ್ಕಾರದ ಉನ್ನತಾಧಿಕಾರ ಸಮಿತಿ ತೆಗೆದುಕೊಂಡಿರುವ ತೀರ್ಮಾನದಲ್ಲಿ ಮತ್ತೆ ಯಾವುದೇ ಬದಲಾವಣೆ ಮಾಡುವುದಿಲ್ಲ' ಎಂದು ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ಸ್ಪಷ್ಟಪಡಿಸಿದೆ.ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಮನವಿಯ ಮೇರೆಗೆ ಆಸ್ಪತ್ರೆಯ ಆವರಣದಿಂದ ವೆುಟ್ರೊ ನಿಲ್ದಾಣವನ್ನು ಸ್ಥಳಾಂತರಿಸಲು ರಾಜ್ಯ ಸರ್ಕಾರದ ಉನ್ನತಾಧಿಕಾರ ಸಮಿತಿಯು ತೀರ್ಮಾನಿಸಿತ್ತು. ಮೆಟ್ರೊ ಪಥ ಬದಲಾವಣೆಯಿಂದ 98 ಕಟ್ಟಡಗಳಿಗೆ ಹಾನಿಯಾಗಲಿದ್ದು, ಇದನ್ನು ಕೈಬಿಡಬೇಕು ಎಂದು ಆಸುಪಾಸಿನ ಸಂತ್ರಸ್ತ ನಿವಾಸಿಗಳು ಆಗ್ರಹಿಸಿದ್ದರು.`ಪಥ ಬದಲಾವಣೆಯಿಂದ ಸಮಸ್ಯೆಯಾಗುತ್ತಿದೆ ಎಂದು ಇಲ್ಲಿನ ನಿವಾಸಿಗಳು ಅಳಲು ತೋಡಿಕೊಂಡಿರುವುದು ನಿಗಮದ ಗಮನಕ್ಕೆ ಬಂದಿದೆ. ಆದರೆ, ಪಥ ಬದಲಾವಣೆಯ ನಿರ್ಧಾರ ತೆಗೆದುಕೊಂಡಿರುವುದು ನಿಗಮ ಅಲ್ಲ' ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

`ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಜಯದೇವ ಆಸ್ಪತ್ರೆಯ ಆವರಣದಲ್ಲಿ ಮೆಟ್ರೊ ನಿಲ್ದಾಣ ನಿರ್ಮಿಸುವುದು ಸಮಂಜಸ ಅಲ್ಲ' ಎಂದು ನಿಗಮವು ತಿಳಿಸಿದೆ.`ಬೈಯಪ್ಪನಹಳ್ಳಿ- ವೈಟ್‌ಫೀಲ್ಡ್ ಮಾರ್ಗದಲ್ಲಿ ಉಂಟಾಗಿರುವ ವಿವಾದದ ಬಗ್ಗೆಯೂ ಕೆಲವರು ನಿಗಮಕ್ಕೆ ದೂರು ಸಲ್ಲಿಸಿದ್ದಾರೆ' ಎಂದು ನಿಗಮವು ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.