ಬೆಂಗಳೂರು: `ನಮ್ಮ ಮೆಟ್ರೊ~ ರೈಲು ಸಂಚಾರಕ್ಕೆ ಇದೇ 20ರಿಂದ ಚಾಲನೆ ದೊರೆಯಲಿರುವ ಹಿನ್ನೆಲೆಯಲ್ಲಿ ಮೆಟ್ರೊ ರೈಲು ನಿಲ್ದಾಣಗಳಿರುವ ರಸ್ತೆಗಳು, ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಬಿಬಿಎಂಪಿ ಆಯುಕ್ತ ಸಿದ್ದಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿವಿಧ ಸ್ಥಳಗಳಲ್ಲಿ ಮಂಗಳವಾರ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು. `ಮೆಟ್ರೊ ರೈಲು ಕಾಮಗಾರಿ ಹಿನ್ನೆಲೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗಿನ ರಸ್ತೆ ಹಾಗೂ ಸಿಎಂಎಚ್ ರಸ್ತೆಯುದ್ದಕ್ಕೂ ಜಲ್ಲಿಕಲ್ಲು, ಮಣ್ಣು, ಇತರೆ ತ್ಯಾಜ್ಯ ಹರಡಿದೆ. ಇದರಿಂದ ವಾಹನ ಸಂಚಾರ ಮತ್ತು ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ~ ಎಂದರು.

`ಆ ಹಿನ್ನೆಲೆಯಲ್ಲಿ ಪೂರ್ವ ವಲಯದಲ್ಲಿ ಲಭ್ಯವಿರುವ ತುರ್ತುಪಡೆ ಸಿಬ್ಬಂದಿ, 10 ಟ್ರ್ಯಾಕ್ಟರ್, 5 ಟಿಪ್ಪರ್ ಮತ್ತು 100 ಮಂದಿ ಗ್ಯಾಂಗ್ಮನ್ಗಳ ಸೇವೆ ಬಳಸಿಕೊಂಡು ಈ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದೇ 17ಕ್ಕೂ ಮೊದಲು ಸ್ವಚ್ಛತಾ ಕಾರ್ಯವನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು~ ಎಂದರು.

`ಬಸವೇಶ್ವರ ವೃತ್ತ, ಮಹಾತ್ಮ ಗಾಂಧಿ ವೃತ್ತ, ಅನಿಲ್ ಕುಂಬ್ಳೆ ವೃತ್ತ, ಎಂ.ಜಿ. ರಸ್ತೆ, ಟ್ರಿನಿಟಿ ವೃತ್ತ, ಮುಂತಾದ ವೃತ್ತಗಳಲ್ಲಿ ಹೂ ಗಿಡಗಳನ್ನು ನೆಟ್ಟಿ, ಸುಂದರ ವಿನ್ಯಾಸ ಮಾಡುವಂತೆ ತೋಟಗಾರಿಕೆ ವಿಭಾಗದ ಅಧಿಕಾರಿಗಳಿಗೆ ಸೂಚಿಸಲಾಗಿದೆ~ ಎಂದರು.

`ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಕೈಗೊಂಡಿದ್ದರೂ ವಾಹನ ಸಂಚಾರ ಒತ್ತಡದಿಂದಾಗಿ ಹೊಸ ಗುಂಡಿಗಳು ನಿರ್ಮಾಣವಾಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ~ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.