ಶನಿವಾರ, ಮೇ 8, 2021
26 °C

ಮೆರವಣಿಗೆ ಸಂಭ್ರಮ ಹೆಚ್ಚಿಸಿದ ಗಣ್ಯರ ನರ್ತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಗಣ್ಯರ ನರ್ತನವು ಡಾ. ಬಾಬು ಜಗಜೀವನರಾಂ ಅವರ ಜಯಂತಿ ನಿಮಿತ್ತ ನಗರದಲ್ಲಿ ಗುರುವಾರ ನಡೆದ ಜಗಜೀವನರಾಂ ಭಾವಚಿತ್ರದ ಮೆರವಣಿಗೆಯ ಮೆರುಗು ಹೆಚ್ಚಿಸಿತು.ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜೇಂದ್ರ ವರ್ಮಾ, ಶಾಸಕ ರಹೀಮ್‌ಖಾನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಾಬುರಾವ್ ಕಾರಬಾರಿ, ಸದಸ್ಯ ಡಾ. ಶೈಲೇಂದ್ರ ಬೆಲ್ದಾಳೆ, ಜಾತ್ಯತೀತ ಜನತಾದಳ ಜಿಲ್ಲಾ ಅಧ್ಯಕ್ಷ ನಸೀಮುದ್ದೀನ್ ಪಟೇಲ್ ಮತ್ತಿತರರು ನರ್ತನ ಮಾಡಿ ಸಂಚಲನ ಮೂಡಿಸಿದರು.ಮೆರವಣಿಗಳಲ್ಲಿ ಉತ್ಸಾಹದಿಂದ ನರ್ತನ ಮಾಡುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ರೇವು ನಾಯಕ್ ಬೆಳಮಗಿ ಮಾತ್ರ ನರ್ತಿಸಲು ಒಪ್ಪಲಿಲ್ಲ. ಅನೇಕ ಗಣ್ಯರು ಒತ್ತಾಯ ಮಾಡಿದರೂ `ಒಲ್ಲೆ~ ಎಂದು ಕೈಜೋಡಿಸಿದರು.ಅಲಂಕೃತ ವಾಹನದಲ್ಲಿ ಬಾಬು ಜನಜೀವನರಾಂ ಅವರ ಭಾವಚಿತ್ರ ಇರಿಸಲಾಗಿತ್ತು. ಬ್ಯಾಂಡ್ ಬಾಜಾ, ಹಲಿಗೆ ಮೆರವಣಿಗೆಯ ಸಂಭ್ರಮ ಇಮ್ಮಡಿಗೊಳಿಸಿದ್ದವು.  ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರಸಭೆ ಅಧ್ಯಕ್ಷೆ ಶ್ರೀದೇವಿ ಕರಂಜೆ ಜಗಜೀವನರಾಂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.