ಬುಧವಾರ, ಮೇ 12, 2021
18 °C

ಮೆಸ್ಕಾಂ ಗುತ್ತಿಗೆ ನೌಕರರ ಮುಷ್ಕರ 17ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೆಸ್ಕಾಂ ಪ್ರಧಾನ ಕಚೇರಿ ಎದುರಲ್ಲಿ ಇದೇ 17ರಿಂದ ಅನಿರ್ದಿಷ್ಟ ಅವಧಿಯ ಮುಷ್ಕರ ನಡೆಸಲು ಮೆಸ್ಕಾಂ ಗುತ್ತಿಗೆ ನೌಕರರ ಸಂಘ ನಿರ್ಧರಿಸಿದೆ.ಮಂಗಳೂರಿನ ನಾಸಿಕ್ ಬಂಗೇರ ಸಭಾಭವನದಲ್ಲಿ ಮಂಗಳವಾರ ನಡೆದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಗುತ್ತಿಗೆ ಆಧಾರದಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿರುವ ಆಪರೇಟರ್, ಸೆಕ್ಯುರಿಟಿ, ವಾಚ್‌ಮನ್, ಬಿಲ್ ಕಲೆಕಟ್ಟರ್, ಮೀಟರ್ ರೀಡರ್, ಕಂಪ್ಯೂಟರ್ ಆಪರೇಟರ್ಸ್‌ ಮೊದಲಾದ ನೌಕರರ ರಾಜ್ಯ ಮಟ್ಟದ ಸಮಾವೇಶದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಸಮಾವೇಶ ಉದ್ಘಾಟಿಸಿದ ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಿ.ಮಾಧವ ಮಾತನಾಡಿ, ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ಸರ್ಕಾರ 1970ರಲ್ಲೇ ನಿಷೇಧಿಸಿದರೂ, ಕನಿಷ್ಠ ಸೌಲಭ್ಯ ಒದಗಿಸದೇ ಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ತೆಗೆದುಕೊಂಡ ದುಡಿಸಲಾಗುತ್ತಿದೆ ಎಂದು ಟೀಕಿಸಿದರು.ನೌಕರರಿಗೆ ಹತ್ತು ಸಾವಿರ ರೂಪಾಯಿ ಕನಿಷ್ಠ ವೇತನ, ಆರೋಗ್ಯ ರಕ್ಷಣೆ, ಉದ್ಯೋಗ ಕಾರ್ಡ್, ಸಮಾನ ಕೆಲಸಕ್ಕೆ ಸಮಾನ ವೇತನ, ಇ.ಎಲ್ ಮೊದಲಾದ ಸೌಲಭ್ಯ ನೀಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಗಿದೆ.

ಸಿಐಟಿಯು ಮುಖಂಡರಾದ ಬಿ.ಎಂ.ಭಟ್, ಸಂಘದ ಕಾರ್ಯದರ್ಶಿ ಮಹೇಶ್, ಡಿವೈಎಫ್‌ಐ ಜಿಲ್ಲಾ ಅಧ್ಯಕ್ಷ ಮುನೀರ್ ಕಾಟಿಪಳ್ಳ ಮೊದಲಾದವರು ಉಪಸ್ಥಿತರಿದ್ದರು.ಸಮಾವೇಶದಲ್ಲಿ ನೂತನ ರಾಜ್ಯ ಸಮಿತಿ ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ಬಿ.ಎಂ.ಭಟ್, ಅಧ್ಯಕ್ಷರಾಗಿ   ಶಿವಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ ಆಯ್ಕೆಯಾದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.