ಸೋಮವಾರ, ಮೇ 17, 2021
22 °C

ಮೇಯರ್ ಆಯ್ಕೆಗೆ ಸಮಿತಿ: ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನ ಮೇಯರ್ ಆಯ್ಕೆಗೆ ಇದೇ 28ರಂದು ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ.ಹತ್ತರಿಂದ ಹನ್ನೆರಡು ಮಂದಿ ಮೇಯರ್ ಸ್ಥಾನದ ಆಕಾಂಕ್ಷಿಗಳಾಗಿದ್ದು, ಸಮಿತಿಯೇ ಹೆಸರನ್ನು ಅಂತಿಮಗೊಳಿಸಲಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಆರ್. ಅಶೋಕ ಹೇಳಿದರು.`ಬೆಂಗಳೂರು ಮಹಾನಗರ ಬಿಜೆಪಿ ಘಟಕದ ಅಧ್ಯಕ್ಷ ಸುಬ್ಬನರಸಿಂಹ, ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ಶಾಸಕರಾದ ಬಿ.ಎನ್.ವಿಜಯಕುಮಾರ್, ಎಸ್. ರಘು, ಎಂ.ಸತೀಶ್ ರೆಡ್ಡಿ ಮತ್ತು ಮಾಜಿ ಮೇಯರ್ ಎಸ್.ಕೆ.ನಟರಾಜ್ ಸಮಿತಿಯ ಸದಸ್ಯರಾಗಿದ್ದಾರೆ. ಈ ಸಮಿತಿ ಏ. 28ರೊಳಗೆ ಹೆಸರೊಂದನ್ನು ಶಿಫಾರಸು ಮಾಡಲಿದೆ~ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.