ಮಂಗಳವಾರ, ಮೇ 18, 2021
30 °C

ಮೇಯರ್ ಆಯ್ಕೆಗೆ ಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ಮೇಯರ್, ಉಪ ಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರಾಗಿ ಯಾರನ್ನು ನೇಮಕ ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸಮಿತಿಯೊಂದನ್ನು ರಚಿಸಲು ಬಿಜೆಪಿ ನಿರ್ಧರಿಸಿದೆ.ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ಸಮ್ಮುಖದಲ್ಲಿ ಗುರುವಾರ ರಾತ್ರಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಸೇರಿದಂತೆ ನಗರದ ಕೆಲ ಶಾಸಕರು ಹಾಜರಿದ್ದರು.ಸಮಿತಿ ರಚನೆ ಕುರಿತು ಶನಿವಾರ ಮತ್ತೊಮ್ಮೆ ಸಭೆ ಸೇರಲಾಗುವುದು. ಸಮಿತಿಯು ಮೇಯರ್, ಉಪಮೇಯರ್, ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಲಿದೆ. ಇದಲ್ಲದೆ, 20 ಮಂದಿ ಸದಸ್ಯರನ್ನು ನಾಮಕರಣ ಮಾಡಿಕೊಳ್ಳಲು ಅವಕಾಶ ಇದ್ದು, ಆ ಬಗ್ಗೆಯೂ ಈ ಸಮಿತಿ ಕೆಲ ಹೆಸರುಗಳನ್ನು ಶಿಫಾರಸು ಮಾಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.