ಸೋಮವಾರ, ಮೇ 17, 2021
28 °C

ಮೇಯರ್ ನಿಧಿ ಸ್ಥಗಿತ ಸಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರ ಮೇಯರ್ ನಿಧಿಯನ್ನು ಸ್ಥಗಿತಮಾಡದೆ ಬಡಜನರಿಗೆ ತಕ್ಷಣ ನೆರವಿಗೆ ಮುಂದಾಬೇಕು ಎಂದು ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಾರ್ಮಿಕ ಕಲ್ಯಾಣ ಸಂಘಗಳ ಒಕ್ಕೂಟದ ರಾಜ್ಯ ಯುವ ಘಟಕದ ಜಿಲ್ಲಾಧ್ಯಕ್ಷ ಸಿ.ರಮೇಶ್  ಸರ್ಕಾರವನ್ನು ಒತ್ತಾಯಿಸಿದ್ದಾರೆ.ನಿಧಿ ನಿಲ್ಲಿಸಲು ಸರ್ಕಾರ ಮುಂದಾಗಿದೆ. ಬಡವರಿಗೆ ತೊಂದರೆ ಉಂಟಾಗ ಲಿದೆ.  ಅನುದಾನ ಸಮರ್ಪಕವಾಗಿ ಬಳಸದ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಗೊಳ್ಳುವಂತೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಬಿಬಿಎಂಪಿ ಮೇಯರ್ ಸ್ಥಾನಕ್ಕೆ ಬನಶಂಕರಿ ವಾರ್ಡ್‌ನ ಸದಸ್ಯ ಎಚ್. ಬಸವರಾಜು ಅವರನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಸದಸ್ಯರಾದ ವಿ.ವೆಂಕಟೇಶ್, ಜಬಿವುಲ್ಲಾ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.