ಗುರುವಾರ , ಮೇ 6, 2021
32 °C

ಮೇಯರ್ ಹುದ್ದೆ: ಕೋರ್ಟ್‌ಗೆ ಮತ್ತೊಂದು ಅರ್ಜಿ

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮೇಯರ್ ಹುದ್ದೆಯನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮೀಸಲಿಟ್ಟು ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಲೋಕೇಶ ವಿ. ನಾಯಕ್ ಮತ್ತು ಇಂದಿರಾ ಎಂಬುವರು ಅರ್ಜಿ ಸಲ್ಲಿಸಿದ್ದಾರೆ.ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ ಅವರು, ಮುಂದಿನ ಆದೇಶದವರೆಗೆ ಚುನಾವಣಾ ವೇಳಾಪಟ್ಟಿ ಪ್ರಕಟ ಮಾಡದಂತೆ ಸರ್ಕಾರಕ್ಕೆ ಗುರುವಾರ ನಿರ್ದೇಶನ ನೀಡಿದ್ದಾರೆ.ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟು ಸರ್ಕಾರ ಫೆಬ್ರುವರಿ 8ರಂದು ಆದೇಶ ಹೊರಡಿಸಿದೆ. ಇದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. 2013- 14ನೇ ಸಾಲಿನಲ್ಲಿ ಮೇಯರ್ ಅಥವಾ ಉಪ ಮೇಯರ್ ಹುದ್ದೆಗಳಲ್ಲಿ ಯಾವುದಾದರೂ ಒಂದನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿಡಬೇಕು ಎಂದು ಕೋರಲಾಗಿದೆ. ಸರ್ಕಾರಕ್ಕೆ ನೋಟಿಸ್ ಜಾರಿಗೆ ಆದೇಶಿಸಿದ ಪೀಠ, ವಿಚಾರಣೆ ಮುಂದೂಡಿದೆ.ಮದನಿ ಅರ್ಜಿ: ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಪಿಡಿಪಿ ಮುಖ್ಯಸ್ಥ ಅಬ್ದುಲ್ ನಾಸಿರ್ ಮದನಿ ಜಾಮೀನು ಕೋರಿ ಮತ್ತೊಮ್ಮೆ ಹೈಕೋರ್ಟ್ ಬಾಗಿಲು ಬಡಿದಿದ್ದಾನೆ.`ಚಿಕಿತ್ಸೆ ಪಡೆದುಕೊಳ್ಳಲು ನನಗೆ ಜಾಮೀನು ನೀಡಬೇಕು' ಎಂದು ಮದನಿ ಕೋರಿದ್ದಾನೆ. ಮದನಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಈ ಹಿಂದೆ ವಜಾ ಮಾಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.