ಶುಕ್ರವಾರ, ಜೂನ್ 18, 2021
23 °C

ಮೇರಿ ಕೋಮ್‌, ದೀಪಾಗೆ ಲಿಮ್ಕಾ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಭಾರತದ ಒಲಿಂಪಿಕ್‌ ಪದಕ ವಿಜೇತ ಬಾಕ್ಸರ್‌ ಎಂ.ಸಿ. ಮೇರಿ ಕೋಮ್‌ ಹಾಗೂ ಅಂತರರಾಷ್ಟ್ರೀಯ  ಪ್ಯಾರಾ ಅಥ್ಲೀಟ್‌ ದೀಪಾ ಮಲಿಕ್‌ ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ ತನ್ನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಅಂಗವಾಗಿ ನೀಡಿದ ‘ವರ್ಷದ ಮಹಿಳೆ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.



ಗುರುವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೋಮ್‌ ಹಾಗೂ ದೀಪಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಟ್ಟು 25 ಮಹಿಳೆಯರಿಗೆ  ಪ್ರಶಸ್ತಿ ನೀಡಲಾಯಿತು.



‘ವಿವಿಧ ವಲಯಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರ ಜೊತೆಗೆ ಸಮಾರಂಭದಲ್ಲಿ ಪಾಲ್ಗೊಂಡಿರು ವುದು ಹೆಮ್ಮೆಯ ವಿಚಾರ. ನಮ್ಮ ಸಾಧನೆಯನ್ನು  ಗುರುತಿಸಿ ಪ್ರಶಸ್ತಿ ನೀಡಿದ ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ನಾನು ಕೃತಜ್ಞಳಾಗಿದ್ದೇನೆ. ಇದು ನನ್ನ ಪಾಲಿಗೆ ಶ್ರೇಷ್ಠ ಗೌರವ’ ಎಂದು ಕೋಮ್‌ ಪ್ರತಿಕ್ರಿಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.