ಮಂಗಳವಾರ, ನವೆಂಬರ್ 19, 2019
27 °C

`ಮೇಲುಕೋಟೆ: ಉಮೇದುವಾರಿಕೆಗಳು ಕ್ರಮಬದ್ಧ'

Published:
Updated:

ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಮೇ 5ರಂದು ನಡೆಯಲಿರುವ ಚುನಾವಣೆಗೆ ಸ್ಪರ್ಧೆ ಬಯಸಿ ವಿವಿಧ ರಾಜಕೀಯ ಪಕ್ಷಗಳಿಂದ ಹಾಗೂ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳ ಉಮೇದುವಾರಿಕೆಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿ ಪುರುಷೋತ್ತಮ ತಿಳಿಸಿದ್ದಾರೆ.ಗುರುವಾರ ಬೆಳಿಗ್ಗೆ ಎಲ್ಲ ಅಭ್ಯರ್ಥಿಗಳ ನಾಮಪತ್ರಗಳನ್ನು ಪರಿಶೀಲನೆ ಮಾಡಲಾಗಿ ಒಟ್ಟು 15 ಮಂದಿ ಅಭ್ಯರ್ಥಿಗಳು 19 ನಾಮಪತ್ರಗಳನ್ನು ಸಲ್ಲಿಸಿದ್ದರು. ಇವರ ಪೈಕಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಲ್.ಡಿ.ರವಿ ಮೂರು ನಾಮಪತ್ರಗಳನ್ನು, ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಕೆ.ಎಸ್.ಪುಟ್ಟಣ್ಣಯ್ಯ ಹಾಗೂ ಬಿಜೆಪಿ ಅಭ್ಯರ್ಥಿ ಜಿ.ಎಂ.ರವೀಂದ್ರ ಎರಡೆರಡು ನಾಮಪತ್ರಗಳನ್ನು ಸಲ್ಲಿಸಿದ್ದರು.

ಪ್ರತಿಕ್ರಿಯಿಸಿ (+)