ಭಾನುವಾರ, ಡಿಸೆಂಬರ್ 8, 2019
25 °C
ಬಾಬ್ರಿ ಮಸೀದಿ ಧ್ವಂಸ: ಅಡ್ವಾಣಿ ದೋಷಮುಕ್ತ

ಮೇಲ್ಮನವಿ ಸಲ್ಲಿಕೆ ವಿಳಂಬ: ಸಿಬಿಐಗೆ ಸುಪ್ರೀಂ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೇಲ್ಮನವಿ ಸಲ್ಲಿಕೆ ವಿಳಂಬ: ಸಿಬಿಐಗೆ ಸುಪ್ರೀಂ ಪ್ರಶ್ನೆ

ನವದೆಹಲಿ (ಪಿಟಿಐ): ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಸಂಚಿನಲ್ಲಿ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಮತ್ತಿತರರ ಪಾತ್ರವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ವಿಳಂಬ ಮಾಡುತ್ತಿರುವ ಸಿಬಿಐ ಧೋರಣೆಯನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.ಈ ಸಂಬಂಧ ಎರಡು ವಾರದೊಳಗೆ ಕೇಂದ್ರ ಸರ್ಕಾರದ ಹಿರಿಯ ಕಾನೂನು ಅಧಿಕಾರಿಗಳಿಂದ ಪ್ರಮಾಣ ಪತ್ರ ಸಲ್ಲಿಸುವಂತೆ ನ್ಯಾಯಮೂರ್ತಿ ಎಚ್.ಎಲ್. ದತ್ತು ಅವರ ನೇತೃತ್ವದ ನ್ಯಾಯಪೀಠ  ನಿರ್ದೇಶನ ನೀಡಿದೆ.`ಕಾನೂನು ಸಚಿವಾಲಯದ ಅಧಿಕಾರಿಗಳಿಂದಾಗಿಯೇ 167 ದಿನಗಳಿಂದ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆ ವಿಳಂಬವಾಗಿದೆ'ಎಂದು ಪೀಠ ಉಲ್ಲೇಖಿಸಿದೆ.ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶದಂತೆ, ಸಿಬಿಐ ಮಂಗಳವಾರ ನ್ಯಾಯಪೀಠಕ್ಕೆ ಪ್ರಕರಣದ ವಿವರಗಳನ್ನು ಸಲ್ಲಿಸಿದೆ.

ಅಲಹಬಾದ್‌ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ಸಿದ್ಧಪಡಿಸಿದ ಮೇಲ್ಮನವಿಗೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಮತ್ತು ಸಾಲಿಸಿಟರ್ ಜನರಲ್ ಅವರಿಂದ ಅನುಮೋದನೆ ಮತ್ತು ಅಭಿಪ್ರಾಯ ಪಡೆಯಲು ವಿಳಂಬವಾಗಿದ್ದರಿಂದ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಸಿಬಿಐ ವಕೀಲರು ತಿಳಿಸಿದ್ದಾರೆ.ಬಾಬ್ರಿ ಮಸೀದಿ ಧ್ವಂಸದ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದ ಕಲ್ಯಾಣ ಸಿಂಗ್, ಉಮಾ ಭಾರತಿ, ವಿನಯ್ ಕಟಿಯಾರ್ ಹಾಗೂ ಮುರಳಿ ಮನೋಹರ್ ಜೋಶಿ ಅವರನ್ನು ಅಲಹಾಬಾದ್ ಹೈಕೋರ್ಟ್ ಆರೋಪ ಮುಕ್ತಗೊಳಿಸಿತ್ತು.

ಪ್ರತಿಕ್ರಿಯಿಸಿ (+)