ಗುರುವಾರ , ಜೂನ್ 24, 2021
24 °C
ಬ್ಯಾಟರಾಯನಪುರ– ವಿಮಾನ ನಿಲ್ದಾಣ

ಮೇಲ್ಸೇತುವೆ ರಸ್ತೆಗೆ ಸಿ.ಎಂ ಹಸಿರು ನಿಶಾನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ‘ಬೆಂಗಳೂರು ಸೇರಿದಂತೆ ನಗರದ ಸುತ್ತಮುತ್ತಲ ರಸ್ತೆ ವ್ಯಾಪ್ತಿ­ಯಲ್ಲಿ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಮೇಲ್ಸೇತುವೆ ರಸ್ತೆ ನಿರ್ಮಾಣ ಮತ್ತು ರಸ್ತೆ ವಿಸ್ತರಣೆ ಅನಿವಾರ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ದೇವನಹಳ್ಳಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಸಾದಹಳ್ಳಿ ಟೋಲ್ ಪ್ಲಾಜಾ ಬಳಿ ಅವರು ಮಾತನಾಡಿದರು.

‘22.12 ಕಿ.ಮೀ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಮೇಲ್ಸೇತುವೆ ರಸ್ತೆ ಅಭಿವೃದ್ಧಿಗೆ ರೂ. 680 ಕೋಟಿ ವೆಚ್ಚವಾಗಿದೆ.  ರಸ್ತೆಯ ಎರಡು ಬದಿಯಲ್ಲಿ 41.82 ಕಿ.ಮೀ ಸರ್ವಿಸ್ ರಸ್ತೆ ಅಭಿವೃದ್ಧಿಯಾಗಿದೆ.

ವಿಮಾನ ನಿಲ್ದಾಣದಿಂದ ವಿಧಾನ ಸೌಧಕ್ಕೆ ಸುಗಮ ಸಂಚಾರಕ್ಕೆ ಅನುಕೂಲ ಮಾಡುವ ಉದ್ದೇಶದಿಂದ ಬಸವೇಶ್ವರ ವೃತ್ತದಿಂದ ಬ್ಯಾಟರಾಯನ­ಪುರದವರೆಗೂ ಷಟ್‌ಪಥ ರಸ್ತೆ ಅಭಿವೃದ್ಧಿಗೆ ರೂ. 1100 ಕೋಟಿ ಮೀಸಲಿಡಲಾಗಿದೆ. ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಪರಿಸ್ಥಿತಿಯೂ ಸುಧಾರಿಸು­ತ್ತದೆ. ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಕೊಡುಗೆ ಅಪಾರವಾಗಿದೆ’ ಎಂದು ತಿಳಿಸಿದರು.ಕಾರ್ಯಕ್ರಮಕ್ಕೆ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್, ‘ದೇಶದಲ್ಲಿ ಮೊದಲ ಬಾರಿಗೆ ಆಟೊರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಆರ್.ಎಸ್.ಬಿ.ವೈ ರಾಷ್ಟ್ರೀಯ ಭೀಮಾ ಯೋಜನೆ ಮೂಲಕ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಇಲ್ಲಿಯವರೆಗೆ 70 ಸಾವಿರ ಅರ್ಹ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಲಾಗಿದೆ.ಇದರಿಂದ ಒಂದು ಕುಟುಂಬದ ಗರಿಷ್ಠ ಐದು ಸದಸ್ಯರು ರೂ. 30 ಸಾವಿರದವರೆಗೆ ಉಚಿತ ಆರೋಗ್ಯ ಸೌಲಭ್ಯ ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.ಕೇಂದ್ರ ಇಂಧನ ಹಾಗೂ ಪೆಟ್ರೋಲಿಯಂ ಸಚಿವ ಡಾ.ಎಂ.ವೀರಪ್ಪ ಮೊಯಿಲಿ,  ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಕೃಷ್ಣಭೈರೇಗೌಡ, ಲೋಕೋಪಯೋಗಿ ಸಚಿವ ಎಚ್.ಸಿ.ಮಹಾದೇವಪ್ಪ, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಶಾಸಕ ವೆಂಕಟರಮಣಪ್ಪ, ವಿಶ್ವನಾಥ, ಜಗದೀಶ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.