ಮಂಗಳವಾರ, ಮೇ 11, 2021
19 °C

ಮೇವಿನ ಪ್ರಮಾಣ ಹೆಚ್ಚಿಸಲು ರೈತರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಗೋಶಾಲೆಗಳಲ್ಲಿ ಜಾನುವಾರುಗಳಿಗೆ ನೀಡುತ್ತಿರುವ ಮೇವಿನ ಪ್ರಮಾಣ ಹೆಚ್ಚಿಸಬೇಕು ಎಂದು ಚಳ್ಳಕೆರೆ ತಾಲ್ಲೂಕಿನ ಸಾಣೀಕೆರೆ ರೈತರು ಜಿಲ್ಲಾ ಉಸ್ತುವಾರಿ ಸಚಿವ ಆನಂದ ವಸಂತ ಅಸ್ನೋಟಿಕರ್ ಅವರನ್ನು ಆಗ್ರಹಿಸಿದರು.ಸಾಣೀಕೆರೆ ಗೋಶಾಲೆಗೆ ಶಾಸಕ ತಿಪ್ಪೇಸ್ವಾಮಿ ಹಾಗೂ ಅಧಿಕಾರಿಗಳ ತಂಡದೊಂದಿಗೆ ಸಚಿವರು ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ತಮ್ಮ ಅಹವಾಲು ಸಲ್ಲಿಸಿದರು.ಈಗ ಜಾನುವಾರುಗಳಿಗೆ ತಲಾ 5 ಕೆಜಿ ನೀಡಲಾಗುತ್ತದೆ. ಇದು ಸಾಕಾಗುತ್ತಿಲ್ಲ. ಮೆಕ್ಕೆಜೋಳದ  ಬದಲಾಗಿ ಬತ್ತದ ಹುಲ್ಲು ತರಿಸಬೇಕು.ಜಾನುವಾರುಗಳು ಮೆಕ್ಕೆಜೋಳದ ದಂಟು ತಿನ್ನುತ್ತಿಲ್ಲ. ಬತ್ತದ ಹುಲ್ಲು ಪೂರೈಸಿದರೆ ಅನುಕೂಲವಾಗುತ್ತದೆ ಎಂದು ರೈತರು ತಿಳಿಸಿದರು.ಗೋಶಾಲೆ ಭೇಟಿ ನಂತರ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ತಿಪ್ಪೇಸ್ವಾಮಿ, ಹೆಚ್ಚಿನ ಪ್ರಮಾಣದಲ್ಲಿ ಮೇವು ತರಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು.ಜಾನುವಾರುಗಳು ಕೇವಲ ಮೆಕ್ಕೆಜೋಳದ ಗರಿ ತಿನ್ನುತ್ತಿವೆ. ಬರ ಇರುವುದರಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹೆಚ್ಚಿನ ಕೆಲಸ ತೆಗೆದುಕೊಳ್ಳಬೇಕು. ಚಳ್ಳಕೆರೆ ಪಟ್ಟಣದಲ್ಲಿ ನೀರಿನ ತೊಂದರೆ ಇದೆ. ಈ ಸಮಸ್ಯೆ ಬಗೆಹರಿಸಲು ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ಪಂಚಾಯಿತಿ  ಮುಖ್ಯ ಕಾರ್ಯ ನಿರ್ವಹಣಾಧಿಕಾರಿ  ಎನ್. ಜಯರಾಂ, ಉಪ ವಿಭಾಗಾಧಿಕಾರಿ ನಾಗರಾಜ್, ತಹಶೀಲ್ದಾರ್ ಡಿ.ಕೆ. ರಾಮಚಂದ್ರಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.