ಚಿತ್ರದುರ್ಗ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುಂಜಾಗ್ರತೆಯಾಗಿ ಹೆಚ್ಚಿನ ಮೇವು ಸಂಗ್ರಹಣೆ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಜಿಲ್ಲಾಧಿಕಾರಿಗೆ ಸೂಚಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಮತ್ತು ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳೊಂದಿಗೆ ಮಂಗಳವಾರ ಬರ ಪರಿಸ್ಥಿತಿ ಕುರಿತು ಕೈಗೊಳ್ಳಲಾಗಿರುವ ಪರಿಹಾರ ಕಾರ್ಯ ಮತ್ತು ಕುಡಿಯುವ ನೀರು ಪೂರೈಕೆ ಹಾಗೂ ಮೇವಿನ ಸಂಗ್ರಹ ಕುರಿತು ನಡೆಸಿದ ವಿಡಿಯೊ ಕಾನ್ಫರೆನ್ಸ್ನಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಾರಂಭಿಸಿರುವ 12 ಗೋಶಾಲೆಗಳಲ್ಲಿ 16 ಸಾವಿರ ಜಾನುವಾರುಗಳಿವೆ. ಈವರೆಗೆ 7,695 ಟನ್ ಮೇವು ಜಾನುವಾರುಗಳಿಗೆ ಬಳಸಲಾಗಿದ್ದು, 675 ಟನ್ ಮೇವು ದಾಸ್ತಾನಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ಕುಡಿಯುವ ನೀರಿನ ಪೂರೈಕೆ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಇರುವ ಕಡೆಗಳಲ್ಲಿ ತಕ್ಷಣ ನೀರಿನ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. 300 ಕೊಳವೆಬಾವಿ ಹೊಸದಾಗಿ ಕೊರೆಯಿಸಲಾಗಿದ್ದು, ಅದರ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಚಳ್ಳಕೆರೆ ತಾಲ್ಲೂಕು ಹಿರೇಹಳ್ಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಜನರು ಉದ್ಯೋಗ ಹರಸಿ ಗುಳೇ ಹೋಗುವ ಪರಿಸ್ಥಿತಿ ಬಗ್ಗೆ ವಿಚಾರಿಸಿದ ಮುಖ್ಯಮಂತ್ರಿಗೆ, ಅಂತಹ ಯಾವುದೇ ಪ್ರಕರಣ ಇಲ್ಲ. ಎನ್ಆರ್ಇಜಿಯಲ್ಲಿ ಈವರೆಗೆರೂ 94 ಕೋಟಿ ಕಾಮಗಾರಿಗಳು ಪ್ರಗತಿಯಾಗಿದ್ದು, 45 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎನ್. ಜಯರಾಂ ತಿಳಿಸಿದರು.

ಚಿತ್ರದುರ್ಗದ ವಿಡಿಯೊ ಕಾನ್ಪರೆನ್ಸ್ನಲ್ಲಿ ಪಾಲ್ಗೊಂಡ ನಗರಾಭಿವೃದ್ಧಿ ಮತ್ತು ಕಾನೂನು ಸಚಿವ ಎಸ್. ಸುರೇಶ್ಕುಮಾರ್, ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ರೂ 14 ಕೋಟಿ ಕುಡಿಯುವ ನೀರಿನ ಕಾರ್ಯಕ್ರಮ ಕೈಗೊಂಡಿದ್ದು, ಇನ್ನೂ 15 ದಿನಗಳಿಗೆ ಆಗುವಷ್ಟು ಮೇವು ದಾಸ್ತಾನಿದೆ ಎಂದು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ `ಸಕಾಲ~ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಉತ್ತಮವಾಗಿ ನಡೆಯುತ್ತಿದೆ. ಕಳೆದ ತಿಂಗಳು ಚಿತ್ರದುರ್ಗ ತಾಲ್ಲೂಕಿನಲ್ಲಿ ಪ್ರಾರಂಭವಾದಗಿನಿಂದ 8,294 ಅರ್ಜಿಗಳು ಬಂದಿದ್ದು, ಅದರಲ್ಲಿ 6,642 ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಲಾಗಿದೆ. ಏ. 2ರಿಂದ ಜಿಲ್ಲಾದ್ಯಂತ ಪ್ರಾರಂಭವಾಗಿರುವ `ಸಕಾಲ~ದಲ್ಲಿ 1,747 ಅರ್ಜಿಗಳು ಸ್ವೀಕೃತವಾಗಿದ್ದು, ಅದರಲ್ಲಿ 982 ಅರ್ಜಿಗಳನ್ನು ವಿಲೇ ಮಾಡಲಾಗಿದೆ ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ಪೂರೈಕೆಗೆ 5 ಮಹಿಳಾ ಆಹಾರ ಉತ್ಪನ್ನ ಘಟಕಗಳನ್ನು ಪ್ರಾರಂಭಿಸಲಾಗಿದೆ. ಇಲ್ಲಿ ಏಪ್ರಿಲ್ನಿಂದ ಆಹಾರ ವಿತರಣೆ ಹೊಸ ಪದ್ಧತಿಯಡಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.