ಗುರುವಾರ , ಆಗಸ್ಟ್ 5, 2021
23 °C

ಮೇ ದಿನಾಚರಣೆ: ಬೃಹತ್ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೇ ದಿನಾಚರಣೆ: ಬೃಹತ್ ಮೆರವಣಿಗೆ

ಚಿಕ್ಕಬಳ್ಳಾಪುರ: ವಿಶ್ವ ಕಾರ್ಮಿಕರ ದಿನದ ಅಂಗವಾಗಿ ನಗರದಲ್ಲಿ ಭಾನುವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಸಂಘಟನೆಯು ಬೃಹತ್ ಮೆರವಣಿಗೆ ನಡೆಸಿತು. ಸಿಐಟಿಯು ಸಂಘಟನೆ ವ್ಯಾಪ್ತಿಯಲ್ಲಿನ ಎಲ್ಲ ಸಾಮೂಹಿಕ ಸಂಘಟನೆಗಳ ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.ನಗರದ ಪ್ರವಾಸಿ ಮಂದಿರದಿಂದ ಸರ್ ಎಂ.ವಿಶ್ವೇಶ್ವರಯ್ಯ ವೃತ್ತದವರೆಗೆ ಮತ್ತು ಅಲ್ಲಿಂದ ಜಿಲ್ಲಾ ಗ್ರಂಥಾಲಯದವರೆಗೆ ಮೆರವಣಿಗೆ ನಡೆಸಿದ ಸಂಘಟನೆಗಳ ಸದಸ್ಯರು, ‘ಕಾರ್ಮಿಕರ ಹಕ್ಕು ಜಾರಿಯಾಗಲೇಬೇಕು. ಕಾರ್ಮಿಕರಿಗೆ ನ್ಯಾಯ ಸಿಗಲೇಬೇಕು’ ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಗಂಗಪ್ಪ ಮಾತನಾಡಿ, ‘ಕಳೆದ 124 ವರ್ಷಗಳಿಂದ ಕಾರ್ಮಿಕರ ಹಕ್ಕು ಮತ್ತು ಹಿತರಕ್ಷಣೆ ಪರ ಹೋರಾಟ ನಡೆಸಲಾಗುತ್ತಿದೆ. ಸಂಘಟಿತ ವಲಯ ಮತ್ತು ಅಸಂಘಟಿತ ವಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರಿದ್ದು, ಅವರ ಬೇಡಿಕೆಗಳು ಈಡೇರಬೇಕಿದೆ’ ಎಂದರು.ಸಿಐಟಿಯು ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ‘ ಕಾರ್ಮಿಕರ ಬಗ್ಗೆ ಕನಿಷ್ಠ ಕಾಳಜಿ ಮತ್ತು ಕಳಕಳಿಯಿದ್ದಲ್ಲಿ, ಸರ್ಕಾರ ಕಾರ್ಮಿಕರು ಎದುರಿಸುತ್ತಿರುವ ಸಂಕಷ್ಟಗಳನ್ನು ಪರಿಹರಿಸಬೇಕು’ ಎಂದರು.ಅಂಗನವಾಡಿ ನೌಕರರ ಸಂಘ, ಆಶಾ ಕಾರ್ಯಕರ್ತೆಯರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಗ್ರಾಮ ಪಂಚಾಯಿತಿ ನೌಕರರ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ, ಜನವಾದಿ ಮಹಿಳಾ ಸಂಘಟನೆ, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಮತ್ತು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.