ಮೇ 25ಕ್ಕೆ ಭಗೀರಥ ಜಯಂತಿ ಆಚರಣೆಗೆ ನಿರ್ಧಾರ

7

ಮೇ 25ಕ್ಕೆ ಭಗೀರಥ ಜಯಂತಿ ಆಚರಣೆಗೆ ನಿರ್ಧಾರ

Published:
Updated:

ಚಾಮರಾಜನಗರ: ಜಿಲ್ಲಾ ಉಪ್ಪಾರ ಸಂಘದಿಂದ ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗ ಣದಲ್ಲಿ ಮೇ 25ರಂದು ಅದ್ದೂರಿಯಾಗಿ ಮಹರ್ಷಿ ಭಗೀರಥ ಜಯಂತಿ ಹಾಗೂ ಉಪ್ಪಾರ ಸಮಾಜದ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.`ಮಹಾನ್ ವ್ಯಕ್ತಿಗಳ ಜಯಂತಿಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಘೋಷಿಸಿ ಸರ್ಕಾರದಿಂದ ಆಚರಿಸಲಾಗುತ್ತಿದೆ. ಹೀಗಾಗಿ, ಉಪ್ಪಾರ ಸಮುದಾಯದ ಮೂಲಪುರುಷ ಭಗೀರಥ ಮಹರ್ಷಿ ಅವರ ಜಯಂತಿಯನ್ನು ಸರ್ಕಾರವೇ ಆಚರಿಸಬೇಕೆಂದು ಸಮಾವೇಶದ ಮೂಲಕ ಒತ್ತಾಯಿಸಲಾಗುವುದು~ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಜನಾಂಗದ ಅಭಿವೃದ್ಧಿಗೆ ವಿಶೇಷ ಸವಲತ್ತು ಕಲ್ಪಿಸಬೇಕು. ಸಮುದಾಯದ ವಸತಿ ಪ್ರದೇಶಗಳ ಅಭಿವೃದ್ಧಿ ಸೇರಿದಂತೆ ಮೂಲ ಸೌಲಭ್ಯ ಒದಗಿಸುವ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಪ್ರವಾಸಿ ಮಂದಿರದಿಂದ ಭಗೀರಥರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ನಂತರ ಮಧ್ಯಾಹ್ನ 12.30ಕ್ಕೆ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ ಎಂದರು.ಸಮಾವೇಶಕ್ಕೆ ಪಕ್ಷಾತೀತವಾಗಿ ರಾಜಕೀಯ ಮುಖಂಡರಿಗೆ ಆಹ್ವಾನ ನೀಡಲಾಗಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, ಸಿ.ಎಂ. ಇಬ್ರಾಹಿಂ, ಶಾಸಕ ವಿ.ಶ್ರೀನಿವಾಸಪ್ರಸಾದ್, ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ, ಸಂಸದರಾದ ಅನಂತ್‌ಕುಮಾರ್, ಎಚ್. ವಿಶ್ವನಾಥ್, ಆರ್. ಧ್ರುವನಾರಾಯಣ, ಶಾಸಕ ಡಿ.ಕೆ. ಶಿವಕುಮಾರ್, ಎಚ್.ಎಸ್. ಮಹದೇವಪ್ರಸಾದ್, ಜಿ.ಎನ್. ನಂಜುಂಡಸ್ವಾಮಿ, ಆರ್. ನರೇಂದ್ರ, ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು.ಸ್ಥಳೀಯ ಸಂಸ್ಥೆಗಳ ಮುಖಂಡರು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾ ವೇಶದಲ್ಲಿ ಎಲ್ಲ ಗ್ರಾಮದ ಮುಖಂಡರು, ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕೋರಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಶಿವಕುಮಾರ್, ಹನುಮಂತಶೆಟ್ಟಿ, ಶ್ರೀನಿವಾಸ್ ಉಪ್ಪಾರ್, ರಾಜಣ್ಣ, ನಂಜುಂಡಶೆಟ್ಟಿ ಇತರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry