ಮೇ 4 ರಿಂದ ಬಯೋ ಮೇಳ

7

ಮೇ 4 ರಿಂದ ಬಯೋ ಮೇಳ

Published:
Updated:

ಬೆಂಗಳೂರು:  ‘ಆಹಾರ ಭದ್ರತೆ ಒದಗಿಸುವಲ್ಲಿ ಹಾಗೂ ರೋಗಗಳನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಜೈವಿಕ ತಂತ್ರಜ್ಞಾನ ಕ್ಷೇತ್ರದ ಹೊಸ ಬೆಳವಣಿಗೆಗಳನ್ನು ಪ್ರಸ್ತುತಪಡಿಸುವ ಹನ್ನೊಂದನೇ ಆವೃತ್ತಿಯ ‘ಬಯೊ ಮೇಳ’ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಮೇ 4ರಿಂದ 6ರವರೆಗೆ ನಡೆಯಲಿದೆ’ ಎಂದು ರಾಜ್ಯ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಶೋಕ ಕುಮಾರ್ ಸಿ.ಮನೋಳಿ ಪ್ರಕಟಿಸಿದರು.

ನಗರದಲ್ಲಿ ನಡೆದ ಸಮಾರಂಭದಲ್ಲಿ ಈ ವಿಷಯವನ್ನು ಅವರು ಪ್ರಕಟಿಸಿದರು. ಇಲಾಖೆಯು ಜೈವಿಕ ತಂತ್ರಜ್ಞಾನದ ವೃದ್ಧಿಗಾಗಿ ರಚಿಸಲಾಗಿರುವ ವಿಷನ್ ಗ್ರೂಪ್ ಹಾಗೂ ಎಂಎಂ ಆಯಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ ಸಂಸ್ಥೆಗಳ ಸಹಯೋಗದೊಂದಿಗೆ ಮೇಳವನ್ನು ಆಯೋಜಿಸಿದೆ.

ಅಮೆರಿಕ, ಕೆನಡಾ, ಇಂಗ್ಲೆಂಡ್, ಜರ್ಮನಿ, ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳ 5,000ಕ್ಕೂ ಪ್ರತಿನಿಧಿಗಳು ಮೇಳಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry