ಭಾನುವಾರ, ಜೂನ್ 13, 2021
21 °C

ಮೈತ್ರಿ ಬಂಡಾಯ ಶಮನಕ್ಕೆ ಸಮಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರ­ಗಳಲ್ಲಿ ಕಾಂಗ್ರೆಸ್‌–ಎನ್‌ಸಿಪಿ ಮೈತ್ರಿಯಲ್ಲಿ ಯಾವುದೇ ಬಿರುಕು ಅಥವಾ ಬಂಡಾಯ ಉಂಟಾಗದಂತೆ ನೋಡಿಕೊಳ್ಳುವುದಕ್ಕೆ 10 ಸದಸ್ಯರ ಸಮನ್ವಯ ಸಮಿತಿ ರಚಿಸಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್‌ ಚವಾಣ್‌ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರಿಗೆ ಸಮಿತಿಯ ನೇತೃತ್ವ ವಹಿಸಲಾಗಿದೆ. ಮೈತ್ರಿಯಲ್ಲಿ ಯಾವುದೇ ಸಮಸ್ಯೆಗಳು ಉಂಟಾದಾಗ ಈ ಸಮಿತಿ ಅದನ್ನು ಪರಿಹರಿಸಲಿದೆ. ಪಕ್ಷದ ಪದಾಧಿಕಾರಿಗಳಿಗೆ ಸಮಸ್ಯೆಗಳನ್ನು ಹೇಳಿಕೊಳ್ಳುವುದಕ್ಕೆ ತಕ್ಷಣವೇ ಸಹಾಯವಾಣಿಯನ್ನು ಕೂಡ ಸ್ಥಾಪಿಸಲಾಗುವುದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.