ಮೈಸೂರಿಗೆ ಹೆಚ್ಚುವರಿ ಬಸ್

7

ಮೈಸೂರಿಗೆ ಹೆಚ್ಚುವರಿ ಬಸ್

Published:
Updated:

ಬೆಂಗಳೂರು:  ಮೈಸೂರಿಗೆ ದಸರಾ ವೀಕ್ಷಣೆಗೆ ತೆರಳುವ ದೇಶವಿದೇಶದ ಪ್ರವಾಸಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.ದಸರಾ ಮುಕ್ತಾಯಗೊಳ್ಳುವವರೆಗೆ ನಗರದಿಂದ ಮೈಸೂರಿಗೆ 175 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುವುದು. ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಾಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಗುಲ್ಬರ್ಗ, ರಾಯಚೂರು ಮುಂತಾದ ಸ್ಥಳಗಳಿಗೆ, ಮಂತ್ರಾಲಯ, ತಿರುಪತಿ, ಹೈದರಾಬಾದ್, ವಿಜಯವಾಡ, ಚೆನ್ನೈ, ಊಟಿ, ಕೊಡೈಕನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮದುರೈ, ತಿರುಚಿ, ಪಣಜಿ, ಶಿರಡಿ, ಮುಂಬೈ, ಎರ್ನಾಕುಲಂ, ತಿರುವನಂತಪುರ ಹಾಗೂ ಇತರ ಸ್ಥಳಗಳಿಗೆ ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಲಾಗುವುದು.ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆಆರ್‌ಎಸ್ ಅಣೆಕಟ್ಟೆ/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್. ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಮತ್ತಿತರ ಸ್ಥಳಗಳಿಗೆ 200 ಬಸ್‌ಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.ಮಾಹಿತಿ ಕೇಂದ್ರ: ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಬಸ್‌ಗಳ ಬಗ್ಗೆ ಮಾಹಿತಿ ನೀಡಲು ಮಾಹಿತಿ ಕೇಂದ್ರವನ್ನು ಪ್ರತ್ಯೇಕವಾಗಿ ತೆರೆಯಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ.ಪ್ರಯಾಣಿಕರು ಬೆಂಗಳೂರಿನ 173, ಮೈಸೂರಿನ 14 ಹಾಗೂ ಮಂಗಳೂರಿನ 54, ರಾಜ್ಯದ ಇತರೆ ಸ್ಥಳಗಳಲ್ಲಿ, ಇತರ ರಾಜ್ಯಗಳ ಪ್ರಮುಖ ನಗರಗಳಲ್ಲಿ ಇರುವ ನಿಗಮದ 230 ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.

ಶೇ 5ರಷ್ಟು ರಿಯಾಯಿತಿ

ನಾಲ್ಕು ಅಥವಾ ಅಧಿಕ ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದರೆ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟನ್ನು ಒಟ್ಟಿಗೆ ಕಾಯ್ದಿರಿಸಿದರೆ ಪ್ರಯಾಣದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು. ಮೊಬೈಲ್‌ನಿಂದ 56767 ಸಂಖ್ಯೆಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಬಹುದು.ವಿಶೇಷ ಪ್ರವಾಸ ಬಸ್

ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ವಿಶೇಷ ಪ್ರವಾಸ  ಬಸ್‌ಗಳ ಕಾರ್ಯಾಚರಣೆ ಮಾಡಲಾಗುವುದು. ಈ ಬಸ್‌ಗಳು ಬೆಳಿಗ್ಗೆ     ಮೈಸೂರಿನಿಂದ ಹೊರಟು ವಿವಿದ ಸ್ಥಳಗಳನ್ನು ಸಂದರ್ಶಿಸಿದ ನಂತರ ಸಂಜೆ ಮೈಸೂರಿಗೆ ಮರಳುತ್ತವೆ.4ಗಿರಿದರ್ಶಿನಿ: ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ ಮತ್ತು  ಚಾಮುಂಡಿ ಬೆಟ್ಟ- 315 ರೂಪಾಯಿ

4ಜಲದರ್ಶಿನಿ:  ನಾಗರಹೊಳೆ, ಇರ್ಪು ಜಲಪಾತ, ಅಬ್ಬಿ ಜಲಪಾತ, ಗೋಲ್ಡನ್ ಟೆಂಪಲ್ (ಬೈಲಕುಪ್ಪೆ)- 315 ರೂಪಾಯಿ

4ದೇವದರ್ಶಿನಿ: ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ, ಕೆಆರ್‌ಎಸ್- 225 ರೂಪಾಯಿ

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry