ಬೆಳಗಾವಿ: ಬೆಂಗಳೂರಿನ ರಿಕ್ರೂಟಿಂಗ್ ಕಚೇರಿ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರ್ ಮೈದಾನದಲ್ಲಿ ಮೇ 2ರಿಂದ 5ರವರೆಗೆ ಭೂಸೇನೆಗಾಗಿ ವಿವಿಧ ಹುದ್ದೆಗಳ ಭರ್ತಿಗೆ ರ್ಯಾಲಿ ನಡೆಯಲಿದೆ.
ಕ್ಲರ್ಕ್/ ಸ್ಟೋರ್ ಕೀಪರ್ ಟೆಕ್ನಿಕಲ್/ ಸೋಲ್ಜರ್ ನರ್ಸಿಂಗ್ ಅಸಿಸ್ಟಂಟ್ ಹುದ್ದೆಗೆ ಮೇ 2ರಂದು ರ್ಯಾಲಿ ನಡೆಯಲಿದ್ದು, ಬೆಳಗಾವಿ, ಗುಲ್ಬರ್ಗ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ 17ರಿಂದ 23 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.

3ರಂದು ಕರ್ನಾಟಕದ ಇನ್ನಿತರ ಜಿಲ್ಲೆಗಳ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. 4ರಂದು ನಡೆಯಲಿರುವ ರ್ಯಾಲಿಯಲ್ಲಿ ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆ ಅಭ್ಯರ್ಥಿಗಳು ಭಾಗವಹಿಸಬಹುದು. ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗೆ 17ರಿಂದ 21 ವರ್ಷದೊಳಗಿನವರು ಇರಬೇಕು.

ಮೇ 5ರಂದು ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆಗೆ ಹಾಗೂ ಸೋಲ್ಜರ್ ಟ್ರೇಡಮನ್ ಹುದ್ದೆಗೆ (17ರಿಂದ 23 ವರ್ಷದೊಳಗೆ) ರ್ಯಾಲಿ ನಡೆಯಲಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ಮೈಸೂರು ಜಿಲ್ಲೆ ಅಭ್ಯರ್ಥಿಗಳು ಹಾಗೂ 6ರಂದು ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಬಹುದು.

ಮೇ 7ರಂದು ಹವಾಲ್ದಾರ ಶಿಕ್ಷಣ (20ರಿಂದ 25 ವರ್ಷದೊಳಗೆ) ಹುದ್ದೆಗೆ ಕರ್ನಾಟಕ ಮತ್ತು ಕೇರಳದ ಎಲ್ಲ ಜಿಲ್ಲೆಗಳ ಹಾಗೂ ಡಿಎಸ್ಇ (48 ವರ್ಷರೊಳಗಿರಬೇಕು) ಹುದ್ದೆಗೆ ಕರ್ನಾಟಕದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಬೆಳಗಾವಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಜಂಟಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.