ಮೈಸೂರಿನಲ್ಲಿ ವಿವಿಎಸ್ ಲಕ್ಷ್ಮಣ್

ಭಾನುವಾರ, ಮೇ 19, 2019
33 °C

ಮೈಸೂರಿನಲ್ಲಿ ವಿವಿಎಸ್ ಲಕ್ಷ್ಮಣ್

Published:
Updated:

ಮೈಸೂರು: ಟೆಸ್ಟ್ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಅವರು ಸೋಮವಾರ ಇಲ್ಲಿಯ ಜೆಸಿಇ-ಕೆಎಸ್‌ಸಿಎ ಮೈದಾನದಲ್ಲಿ ನಡೆಯಲಿರುವ ಶಫಿ ದಾರಾಶಾ ಟ್ರೋಫಿ  ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಹೈದರಾಬಾದ್ ತಂಡದ ಪರವಾಗಿ ಆಡಲಿದ್ದಾರೆ.ಶನಿವಾರ ರಾತ್ರಿ ಮೈಸೂರಿಗೆ ಆಗಮಿಸಿರುವ ಲಕ್ಷ್ಮಣ್, ಭಾನುವಾರ ಮಧ್ಯಾಹ್ನ  3ರಿಂದ 5 ಗಂಟೆಯವರೆಗೆ ಗಂಗೋತ್ರಿ ಗ್ಲೇಡ್ಸ್‌ನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕ್ರಿಕೆಟ್ ತರಬೇತಿ ಅಕಾಡೆಮಿಯ ನೆಟ್ಸ್‌ನಲ್ಲಿ ಅಭ್ಯಾಸ ನಡೆಸಿದರು.ತಂಡದ ಕೋಚ್ ಆಗಿರುವ ಕರ್ನಾಟಕದ ಮಾಜಿ ರಣಜಿ ಆಟಗಾರ ಸುನಿಲ್ ಜೋಶಿ ಮತ್ತು ತಂಡದ ಆಟಗಾರರು ಹಾಜರಿದ್ದರು. ಸೋಮವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರ ಇಲೆವನ್ ತಂಡವನ್ನು ಹೈದರಾಬಾದ್ ಎದುರಿಸಲಿದೆ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry