ಸೋಮವಾರ, ಏಪ್ರಿಲ್ 19, 2021
32 °C

ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರೀಸಾವೆ: `ವಿಶ್ವಕರ್ಮ ಸಮಾಜದವರ ಎಂಟು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಅರವತ್ತೇಳು ಸ್ವಾಮೀಜಿಗಳ ನೇತೃತ್ವದಲ್ಲಿ ಸೆಪ್ಟೆಂಬರ್ 8 ರಂದು ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ~ ಎಂದು ರಾಜ್ಯ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ತಿಳಿಸಿದರು.ಪಟ್ಟಣದ ಚೌಡೇಶ್ವರಿ ಸಮುದಾಯ ಭವನದಲ್ಲಿ ಹೋಬಳಿಯ ವಿಶ್ವಕರ್ಮ ಸಂಘದವರು ಶನಿವಾರ ಏರ್ಪಡಿಸಿದ್ದ ಸಮಾವೇಶದಲ್ಲಿ ಅವರು ಮಾತನಾಡಿದರು. `ರಾಜ್ಯದಲ್ಲಿ ವಿಶ್ವಕರ್ಮ ಸಮುದಾಯದ 35 ಲಕ್ಷ ಜನರಿದ್ದು, ಯಾವ ಸರ್ಕಾರವೂ ನಮ್ಮ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸಿಲ್ಲ. 12 ವರ್ಷಗಳಿಂದ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ರಾಜಕೀಯವಾಗಿ ಈ ಸಮುದಾಯಕ್ಕೆ ಪ್ರಾತಿನಿಧ್ಯ ಲಭಿಸಿಲ್ಲ~ ಎಂದು ಹೇಳಿದರು.ವಿಶ್ವಕರ್ಮ ಮಠಗಳ ಅಭಿವೃದ್ಧಿಗೆ ಸರ್ಕಾರದಿಂದ ಹಣ ನೀಡುವುದು, ಚಿನ್ನ ಬೆಳ್ಳಿ ವರ್ತಕರ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಕಾನೂನು ಜಾರಿಗೊಳಿಸುವುದು, ವಿಶ್ವಕರ್ಮ ಸಮುದಾಯದವರಿಗೆ ಶೇ 3 ಮೀಸಲಾತಿ, ವಿಶ್ವಕರ್ಮ ಜಯಂತಿಯಂದು ( ಸೆ.18) ರಜೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಸ್.ಶ್ರೀಧರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್.ಜಿ.ರಾಮಕೃಷ್ಣ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಉಪಾಧ್ಯಕ್ಷ ಬೊಮ್ಮೇಗೌಡ, ರೈತ ಸಂಘದ ಎಚ್.ವಿ.ಕೃಷ್ಣೇಗೌಡ, ವಿಶ್ವಕರ್ಮ ಹೋಬಳಿ ಘಟಕದ ಅಧ್ಯಕ್ಷ ಸೋಮಶೇಖರ್ ಇದ್ದರು. ಶ್ರೀನಿವಾಸು ಸ್ವಾಗತಿಸಿ, ವಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.