ಮೈಸೂರು: ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯಬಹುದು ಎನ್ನುವ ವದಂತಿ ಹಿನ್ನೆಲೆಯಲ್ಲಿ ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಈ ರಾಜ್ಯಗಳ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ನಗರದ ಟೆರೆಶಿಯನ್ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ 142 ವಿದ್ಯಾರ್ಥಿನಿಯರ ಪೈಕಿ 42 ಮಂದಿ, ಸಂತ ಫಿಲೋಮಿನಾ ಕಾಲೇಜಿನ 60 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಗುರುವಾರ ತಮ್ಮ ತವರಿಗೆ ಮರಳಿದ್ದಾರೆ. ದಾಳಿಯ ವದಂತಿಯಿಂದ ಭಯಭೀತರಾಗಿರುವ ಪೋಷಕರು ಕೇವಲ ಎರಡು ಗಂಟೆ ಅವಧಿಯಲ್ಲಿ 45 ಮಂದಿಯನ್ನು ಕರೆದುಕೊಂಡು ಹೋಗಿದ್ದಾರೆ.

ನಗರದಲ್ಲಿ ವ್ಯಾಸಂಗ ಮಾಡುತ್ತಿರುವ ಅಸ್ಸಾಂ, ಅರುಣಾಚಲ ಪ್ರದೇಶ, ಮಿಜೋರಾಂ ಸೇರಿದಂತೆ ಇನ್ನಿತರ ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ.

ಆಗಸ್ಟ್ 14 ರ ಸಂಜೆ ನಗರದ ಧನ್ವಂತ್ರಿ ರಸ್ತೆಯಲ್ಲಿ ಟಿಬೆಟ್ ಮೂಲದ ತೇನ್ಜಿನ್ ದರ್ಗಿವಾಲ್ ಎನ್ನುವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಇದರಿಂದಾಗಿ ಟಿಬೆಟ್ ಮತ್ತು ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳು ಭಯಗೊಂಡಿದ್ದಾರೆ.

ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಅಂತಿಮ ವರ್ಷದ ಕಾನೂನು ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಣಿಪುರದ ಅನಾಮಿಕಾದೇವಿ ನಗರ ಪೊಲೀಸ್ ಕಮಿಷನರ್ ಕೆ.ಎಲ್.ಸುಧೀರ್ ಅವರನ್ನು ಭೇಟಿ ಮಾಡಿ 80 ವಿದ್ಯಾರ್ಥಿಗಳ ಸಹಿ ಇರುವ ಪತ್ರವನ್ನು ನೀಡಿ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಪೊಲೀಸರು ಮತ್ತು ಕಾಲೇಜುಗಳ ಆಡಳಿತ ಮಂಡಳಿ ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡುವ ಭರವಸೆ ನೀಡಿವೆ. ಆದರೂ ಇವರಲ್ಲಿ ಆತಂಕ ಕಡಿಮೆಯಾಗಿಲ್ಲ. ನಗರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ಕಾಲೇಜು ಪ್ರಾಂಶುಪಾಲರಿಗೆ ದೂರವಾಣಿ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿಕೊಳ್ಳುತ್ತಿದ್ದಾರೆ.

`ನಮ್ಮ ಕಾಲೇಜಿನಲ್ಲಿ 142 ಮಂದಿ ಈಶಾನ್ಯ ರಾಜ್ಯಗಳ ವಿದ್ಯಾರ್ಥಿನಿಯರು ಇದ್ದಾರೆ. ಇವರಲ್ಲಿ 42 ಮಂದಿಯನ್ನು ಪೋಷಕರು ಕರೆದುಕೊಂಡು ಹೋಗಿದ್ದಾರೆ~ ಎಂದು ಟೆರೆಶಿಯನ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಸಜೀತಾ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

`ನಮ್ಮಲ್ಲಿ ಈಶಾನ್ಯ ರಾಜ್ಯಗಳ 60 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಲ್ಲಿ ಇಬ್ಬರು ಬೆಂಗಳೂರಿಗೆ ಹೋದರೆ, ಮತ್ತೊಬ್ಬ ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ನಿರಾಶ್ರಿತರ ಶಿಬಿರಕ್ಕೆ ತೆರಳಿದ್ದಾನೆ. ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ನಿಲಯಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಕೆಲವು ವಿದ್ಯಾರ್ಥಿಗಳು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ತಾತ್ಕಾಲಿಕವಾಗಿ ಆಶ್ರಯ ನೀಡಲಾಗಿದೆ~ ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ಫಾದರ್ ಲೆಸ್ಲಿ ಮೊರಾಸ್ ತಿಳಿಸಿದರು.

ಜಯಲಕ್ಷ್ಮಿಪುರಂನಲ್ಲಿರುವ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ 11 ವಿದ್ಯಾರ್ಥಿಗಳು ಇದ್ದಾರೆ. ಮೈಸೂರು ವಿಶ್ವವಿದ್ಯಾನಿಲಯವು ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಿದೆ.

ಸ್ನಾತಕೋತ್ತರ ವಿಭಾಗದಲ್ಲಿ 13 ಮಂದಿ ಇದ್ದರೆ, ಪದವಿಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿ.ಜಿ.ತಳವಾರ್ ಹೇಳಿದರು.

ಟಿಬೆಟ್ನ ಯುವಕನ ಮೇಲೆ ದಾಳಿ ನಡೆದ ನಂತರ ನಗರದ ಪುರಭವನ, ಅಪೇರಾ ಚಿತ್ರಮಂದಿರ, ಶ್ರೀಹರ್ಷ ರಸ್ತೆಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಟಿಬೆಟನ್ನರು ವ್ಯಾಪಾರವನ್ನು ಸ್ಥಗಿತಗೊಳಿಸಿ ಹುಣಸೂರು ತಾಲ್ಲೂಕಿನ ಗುರುಪುರ ಮತ್ತು ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ನಿರಾಶ್ರಿತ ಶಿಬಿರಕ್ಕೆ ಮರಳಿದ್ದಾರೆ. ಇವೆರಡು ಶಿಬಿರಗಳಲ್ಲಿ ಯಾವುದೇ ಆತಂಕವಿಲ್ಲದೆ ಟಿಬೆಟನ್ನರು ಬದುಕುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.