ಗುರುವಾರ , ಮಾರ್ಚ್ 4, 2021
26 °C

ಮೈಸೂರು ನ್ಯಾಯಾಲಯಕ್ಕೆ ಬಿಗಿ ಭದ್ರತೆ; ವಕೀಲರಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು ನ್ಯಾಯಾಲಯಕ್ಕೆ ಬಿಗಿ ಭದ್ರತೆ; ವಕೀಲರಿಂದ ಪ್ರತಿಭಟನೆ

ಮೈಸೂರು: ಸ್ಫೋಟ ಸಂಭವಿಸಿರುವುದನ್ನು ಖಂಡಿಸಿ ಹಾಗೂ ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿ  ಮಂಗಳವಾರ ವಕೀಲರು ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು.ನ್ಯಾಯಾಲಯದ ಮುಂದಿನ ಮಹಾತ್ಮ ಗಾಂಧಿ ಪ್ರತಿಮೆ ಸುತ್ತ ಮಾನವ ಸರಪಳಿ ರಚಿಸಿದ ಜಿಲ್ಲಾ ವಕೀಲರ ಸಂಘದ ಸದಸ್ಯರು ನ್ಯಾಯಾಲಯಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಸಂಘದ ಅಧ್ಯಕ್ಷ ಚಂದ್ರಮೌಳ್ವಿ, ಉಪಾಧ್ಯಕ್ಷ ಚಂದ್ರಶೇಖರ್, ಪದಾಧಿಕಾರಿಗಳಾದ ಜೀವನ್, ಶ್ರೀಕೃಷ್ಣ, ಸನತ್, ದಿನೇಶ್‌ಗೌಡ ಹಾಗೂ ಇತರರು ಭಾಗವಹಿಸಿದ್ದರು.

ಈ ಮಧ್ಯೆ ಜಿಲ್ಲಾ ವಕೀಲರ ಸಂಘಕ್ಕೆ ಸಾರ್ವಜನಿಕರಿಗೆ ಪ್ರವೇಶ ನೀಡದಿರಲು ಸಂಘ ನಿರ್ಧರಿಸಿದೆ.ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ಬೆಂಗಳೂರಿನಿಂದ ಬೆಳಿಗ್ಗೆಯೇ ಬಂದ ಬಾಂಬ್ ನಿಷ್ಕ್ರಿಯ ದಳವು ಸ್ಫೋಟ ಸಂಭವಿಸಿದ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸಿತು. ಸ್ಥಳದಲ್ಲಿ ಸಿಕ್ಕ ವಸ್ತುಗಳನ್ನು ಹೆಚ್ಚಿನ ಅಧ್ಯಯನಕ್ಕೆ ಸದಸ್ಯರು ತೆಗೆದುಕೊಂಡರು.ಸ್ಫೋಟ ಸಂಭವಿಸಿದ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೂ ಮೊಕ್ಕಾಂ ಹೂಡಿದ್ದು, ಇನ್ನಷ್ಟು ಪರಿಶೀಲನೆ ನಡೆಸುತ್ತಿದ್ದಾರೆ.ನ್ಯಾಯಾಲಯದ ಆವರಣದಲ್ಲಿ ಬಿಗಿಭದ್ರತೆ ಕಲ್ಪಿಸಲಾಗಿದ್ದು, ಆವರಣದ ಗೇಟ್ ಬಳಿ ಲೋಹಶೋಧಕ ಯಂತ್ರವನ್ನು ಅಳವಡಿಸಲಾಗಿದೆ. ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.