ಸೋಮವಾರ, ಮೇ 17, 2021
25 °C

ಮೈಸೂರು ವಿವಿ 92ನೇ ಘಟಿಕೋತ್ಸವ:7 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 92 ನೇ ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಏಳು ಗಣ್ಯರಿಗೆ ಶನಿವಾರ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.ವಿವಿಯ ಕ್ರಾಫರ್ಡ್ ಭವನದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವರೂ ಆಗಿರುವ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಖ್ಯಾತ ವಿಜ್ಞಾನಿ, ಬೆಂಗಳೂರು ಇಸ್ರೋ ಸ್ಯಾಟಲೈಟ್ ಕೇಂದ್ರದ ನಿರ್ದೇಶಕ ಎಸ್.ಕೆ. ಶಿವಕುಮಾರ್, ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಪ್ರೊ. ಪಿ.ವಿ. ಕೃಷ್ಣಭಟ್ಟ, ಗಾಂಧಿವಾದಿ, ಮಾಜಿ ಸಂಸದ ಜಿ.ಮಾದೇಗೌಡ, ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಸದಸ್ಯ ಹಾಗೂ ಎನ್‌ಐಪಿಎಫ್‌ಪಿ ನಿರ್ದೇಶಕ ಡಾ.ಎಂ.ಗೋವಿಂದರಾವ್, ಹಿರಿಯ ಚಿತ್ರನಟಿ ಜಯಂತಿ, ಪ್ರವಚನಕಾರ ಪಾವಗಡ ಪ್ರಕಾಶ್‌ರಾವ್ ಹಾಗೂ ಖ್ಯಾತ ಕಲಾವಿದ ಸಿ.ಚಂದ್ರಶೇಖರ ಅವರುಗಳಿಗೆ ಕಾರ್ಯಕ್ರದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ರಾಜ್ಯ ಸಚಿವೆ ಡಿ.ಪುರಂದೇಶ್ವರಿ ಘಟಿಕೋತ್ಸವ ಭಾಷಣ ಮಾಡಿದರು.`ಇಡೀ ಶಿಕ್ಷಣ ವ್ಯವಸ್ಥೆಯಲ್ಲಿ ಬುದ್ಧಿ, ಅಂತರ್ಬೋಧೆ, ವಿಜ್ಞಾನ ಹಾಗೂ ಆಧ್ಯಾತ್ಮಿಕತೆ, ಬದುಕು ಹಾಗೂ ಜಿಜ್ಞಾಸೆಗಳನ್ನು ಸಮಾನವಾಗಿ ಪ್ರೋತ್ಸಾಹಿಸುವ ಕ್ರಮ ಶಿಕ್ಷಣದಲ್ಲಿ ಬರಬೇಕು~ ಎಂದರು.ಘಟಿಕೋತ್ಸವದಲ್ಲಿ 17,981 ಅಭ್ಯರ್ಥಿಗಳಿಗೆ ಪದವಿ, 298 ಅಭ್ಯರ್ಥಿಗಳಿಗೆ ಪಿಎಚ್‌ಡಿ, 292 ಅಭ್ಯರ್ಥಿಗಳಿಗೆ ಚಿನ್ನದ ಪದಕ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.