ಗುರುವಾರ , ಮೇ 19, 2022
21 °C

ಮೈಸೂರು, ಹಾಸನ ಜಿಲ್ಲೆಗಳ ಕೆಲವೆಡೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲೆಯ ಹಲವೆಡೆ ಹಾಗೂ ಹಾಸನ ಜಿಲ್ಲೆಯ ಕೆಲವೆಡೆ ಗುರುವಾರ ಮಧ್ಯಾಹ್ನ ದಿಢಿರ್ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಮೈಸೂರು, ಹುಣಸೂರು, ಎಚ್.ಡಿ.ಕೋಟೆ ತಾಲ್ಲೂಕುಗಳಲ್ಲಿ ಭಾರೀ ಮಳೆಯಾಗಿದೆ. ಹುಣಸೂರಿನ ಕೆಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಹುಣಸೂರು ಮತ್ತು ಎಚ್.ಡಿ.ಕೋಟೆ ತಾಲ್ಲೂಕುಗಳ ಗ್ರಾಮಗಳಲ್ಲಿಯೂ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆ ಸತತವಾಗಿ ಎರಡು  ಗಂಟೆಗೂ ಹೆಚ್ಚು ಕಾಲ ಸುರಿದು ಬೇಸಿಗೆ ಬಿಸಿಲಿಗೆ ತಂಪೆರೆಯಿತು. ಹಾಸನ ಜಿಲ್ಲೆಯ ಹಳೇಬೀಡು, ಬೇಲೂರುಗಳಲ್ಲಿಯೂ ಮಳೆಯಾಗಿದೆ. ಮಳೆಯಿಂದ ಯಾವುದೇ ಹಾನಿ ಸಂಭವಿಸಿದ ವರದಿಯಾಗಿಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.